Home ಟಾಪ್ ಸುದ್ದಿಗಳು ಕೋವಿಡ್ ನಿಯಮ ಉಲ್ಲಂಘಿಸಿದವರ ವಿರುದ್ಧ ಪ್ರಕೃತಿ ವಿಕೋಪ ತಡೆ ಕಾಯ್ದೆಯಡಿ ಕ್ರಮ: ಆರಗ ಜ್ಞಾನೇಂದ್ರ

ಕೋವಿಡ್ ನಿಯಮ ಉಲ್ಲಂಘಿಸಿದವರ ವಿರುದ್ಧ ಪ್ರಕೃತಿ ವಿಕೋಪ ತಡೆ ಕಾಯ್ದೆಯಡಿ ಕ್ರಮ: ಆರಗ ಜ್ಞಾನೇಂದ್ರ

ಬೆಂಗಳೂರು: ಕೋವಿಡ್ ನಿಯಮ ಉಲ್ಲಂಘಿಸಿದವರ ವಿರುದ್ಧ ಪ್ರಕೃತಿ ವಿಕೋಪ ತಡೆ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗುವುದೆಂದು ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ‘ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿಧಿಸಿದ ನಿರ್ಬಂಧಗಳನ್ನು ಉಲ್ಲಂಘಿಸಿದವರ ವಿರುದ್ಧ ಪ್ರಕೃತಿ ವಿಕೋಪ ತಡೆ ಕಾಯ್ದೆಯಡಿ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದರು.

‘ಕೋವಿಡ್ ಮುಂಜಾಗ್ರತಾ ಕ್ರಮವಾಗಿ ತೆಗೆದುಕೊಂಡ ನಿಯಮಗಳನ್ನು ಎಲ್ಲರೂ ಬೆಂಬಲಿಸಿ, ಸಹಕರಿಸಬೇಕು’ ಎಂದು ಮನವಿ ಮಾಡಿದ್ದಾರೆ.

ವಾರಾಂತ್ಯ ಕರ್ಫ್ಯೂ ಹಾಗೂ ನೈಟ್ ಕರ್ಫ್ಯೂ ಜಾರಿ ವೇಳೆ ಪೊಲೀಸರು ಅತ್ಯಂತ ಸಹನೆಯಿಂದ ವರ್ತಿಸಬೇಕು, ಸಾರ್ವಜನಿಕರೂ ಸಹಕರಿಸಬೇಕು ಎಂದು ಹೆಳಿದ್ದಾರೆ.

Join Whatsapp
Exit mobile version