ಗಂಡನ ಕಿರುಕುಳ ಆರೋಪ: ಪತ್ನಿ ಆತ್ಮಹತ್ಯೆ

Prasthutha|

ಹೊಸಕೋಟೆ: ಗಂಡನ ಕಿರುಕುಳದಿಂದ ಮನನೊಂದು ಪತ್ನಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊಸಪೇಟೆಯ ಅರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

- Advertisement -


ಮೃತರನ್ನು ದೀಪ ಎಂದು ಗುರುತಿಸಲಾಗಿದೆ.


ಅರಸನಹಳ್ಳಿ ಗ್ರಾಮದ ನಿವಾಸಿ ಮೋಹನ್ ಕುಮಾರ್ ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ದಂಪತಿಗೆ ಒಂದು ಮಗು ಇದೆ. ಮದುವೆಯಾದ ಮೂರು ವರ್ಷಗಳವರೆಗೆ ದಂಪತಿ ಅನ್ಯೋನ್ಯವಾಗಿದ್ದರು. ಬಳಿಕ ಮನೋಜ್, ದೀಪ ವಿರುದ್ಧ ಅನೈತಿಕ ಸಂಬಂಧದ ಆರೋಪ ಹೊರಿಸಿ ಚಿತ್ರಹಿಂಸೆ ನೀಡಲು ಶುರು ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಅಲ್ಲದೆ ವರದಕ್ಷಿಣೆ ನೀಡುವಂತೆಯೂ ಕಿರುಕುಳ ಕೊಡಲು ಆರಂಭಿಸಿದ್ದಾನೆ ಎಂದು ದೀಪಾಳ ಕುಟುಂಬಸ್ಥರು ಆರೋಪಿಸಿದ್ದಾರೆ.

- Advertisement -


ಗಂಡನ ಕಿರುಕುಳಕ್ಕೆ ಬೇಸತ್ತು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.



Join Whatsapp