ಪತ್ನಿಯನ್ನು ಕೊಂದು ವಿಮಾನದಲ್ಲಿ ಪರಾರಿಯಾಗಿದ್ದ ಪತಿ ಬಂಧನ

Prasthutha|

- Advertisement -

ಬೆಂಗಳೂರು: ಪತ್ನಿಯನ್ನು ಕೊಲೆ ಮಾಡಿ ಮೊದಲೇ ರೂಪಿಸಿದ್ದ ಸಂಚಿನಂತೆ ವಿಮಾನದಲ್ಲಿ‌ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಸದ್ದುಗುಂಟೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಪತ್ನಿ ನಾಝ್​’ಳನ್ನು ಕೊಲೆ ಮಾಡಿ ಪರಾರಿಯಾಗಿದ್ದ ನಾಸಿರ್ ಹುಸೇನ್ ಬಂಧಿತ ಆರೋಪಿಯಾಗಿದ್ದಾನೆ.

- Advertisement -

ಕೊಲೆಯಾದ ನಾಝ್​, ಸಾಫ್ಟ್‌ವೇರ್ ಉದ್ಯೋಗಿ ಎಂದು ನಾಸಿರ್ ಹುಸೇನ್​ನನ್ನು ಪ್ರೀತಿಸಿ ವಿವಾಹವಾಗಿದ್ದಳು. ಅರೋಪಿ ನಾಸಿರ್ ಪಶ್ಚಿಮ ಬಂಗಾಳ ಮೂಲದವನಾಗಿದ್ದು, ಕೊಲೆ ಮಾಡುವ ಮೊದಲೇ ದೆಹಲಿಗೆ ವಿಮಾನ ಟಿಕೆಟ್ ಬುಕ್ ಮಾಡಿದ್ದ.

ನಂತರ ಕೊಲೆ ಮಾಡಿ ಟ್ಯಾಕ್ಸಿ ಮೂಲಕ ವಿಮಾನ‌ನಿಲ್ದಾಣಕ್ಕೆ​ ತೆರಳಿದ್ದ. ನಂತರ ಟ್ಯಾಕ್ಸಿ ಚಾಲಕನಿಗೆ 4000 ರೂ. ಹಣ ಫೋನ್ ಪೇ ಮಾಡಿ 3500 ರೂ. ಹಣವನ್ನು ಮರಳಿ ಪಡೆದುಕೊಂಡಿದ್ದ.

ದೆಹಲಿ ವಿಮಾನ ಟೇಕ್​ಆಫ್ ಆಗುತ್ತಿದ್ದಂತೆ ಪತ್ನಿ ನಾಝ್​ಳನ್ನು ಕೊಲೆ ಮಾಡಿರುವುದಾಗಿ ಆಕೆಯ ಸಹೋದರನಿಗೆ ಮೆಸೇಜ್ ಮಾಡಿ, “ನಿನ್ನ ತಂಗಿಯ ಅಕ್ರಮ ಸಂಬಂದಕ್ಕೆ ಕೋಪಗೊಂಡು ಕೊಲೆ ಮಾಡಿದ್ದೇನೆ. ಮನೆಗೆ ಹೋಗಿ ಮೃತದೇಹವನ್ನು ತೆಗೆದುಕೊಳ್ಳಿ” ಎಂದು ಹೇಳಿ ಮೊಬೈಲ್ ಆಫ್ ಮಾಡಿ ಪರಾರಿಯಾಗಿದ್ದ.

ಈ ಸಂಬಂಧ ಪ್ರಕರಣ ದಾಖಲಿಸಿ ಕಾರ್ಯಾಚರಣೆ ಕೈಗೊಂಡ ಸುದ್ದಗುಂಟೆ ಪಾಳ್ಯ ಪೊಲೀಸರು ಮೊಬೈಲ್ ಜಾಡು ಹಿಡಿದು ದೆಹಲಿಗೆ ತೆರಳಿ ಆರೋಪಿಯನ್ನು ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ.

Join Whatsapp