ಎರಡು ಪ್ರತ್ಯೇಕ ಕಾಯ್ದೆ ಅಡಿಯಲ್ಲಿ ಜೀವನಾಂಶ ಪಡೆಯಲು ಪತ್ನಿ ಅರ್ಹಳು: ಹೈಕೋರ್ಟ್

Prasthutha|

ಬೆಂಗಳೂರು: ಕೌಟುಂಬಿಕ ಕಲಹ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿಯು ಪತಿಯಿಂದ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ಹಾಗೂ ಹಿಂದೂ ವಿವಾಹ ಕಾಯ್ದೆಯಡಿ ಎರಡರಿಂದಲೂ ಜೀವನಾಂಶ ಪಡೆಯಲು ಅರ್ಹಳಾಗಿದ್ದು, ಜೀವನಾಂಶದ ಪ್ರಮಾಣವನ್ನು ನ್ಯಾಯಾಲಯವೇ ಹೊಂದಾಣಿಕೆ ಮಾಡಬಹುದು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

- Advertisement -

ಈ ಸಂಬಂಧ 34 ವರ್ಷದ ಪತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದ್ದು, ಒಂದು ಕಾಯ್ದೆಯಡಿ ಜೀವನಾಂಶ ನೀಡಲಾಗಿದೆ ಎಂಬ ಕಾರಣಕ್ಕೆ ಮತ್ತೊಂದು ಕಾಯ್ದೆಯಡಿ ಜೀವನಾಂಶ ನೀಡಲಾಗದು ಎಂದು ಹೇಳಲು ಸಾಧ್ಯವಿಲ್ಲ. ಎರಡೂ ಕಾಯ್ದೆಯಡಿ ಜೀವನಾಂಶದ ಪ್ರಮಾಣವನ್ನು ನ್ಯಾಯಾಲಯವೇ ಹೊಂದಾಣಿಕೆ ಮಾಡಬೇಕು ಎಂದು ಪತಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾಗೊಳಿಸಿದೆ.

ಅರ್ಜಿದಾರ ಪತಿ 2018ರಲ್ಲಿ 28 ವರ್ಷದ ತರುಣಿಯನ್ನು ವಿವಾಹವಾಗಿದ್ದರು. ದಂಪತಿಗೆ ಸಂತಾನ ಇರಲಿಲ್ಲ. ಈ ಮಧ್ಯೆ, ಪತಿ ಕಿರುಕುಳ ನೀಡುತ್ತಿದ್ದಾರೆ’ ಎಂದು ಆರೋಪಿಸಿದ್ದ ಪತ್ನಿ 2020ರ ಡಿಸೆಂಬರ್ 11ರಂದು ಪತಿ ಮತ್ತು ಅವರ ಕುಟುಂಬದ ಸದಸ್ಯರ ವಿರುದ್ಧ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ದೂರು ದಾಖಲಿಸಿದ್ದರು. ಈ ಸಂಬಂಧ ಪತ್ನಿಗೆ 30,000 ರೂ.ಗಳ ಮಧ್ಯಂತರ ಜೀವನಾಂಶವನ್ನು  ನೀಡುವಂತೆ ಸ್ಥಳೀಯ ಕೌಟುಂಬಿಕ ನ್ಯಾಯಾಲಯವು ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಪತಿ ಸೆಷನ್ಸ್ ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ ಸೆಷನ್ಸ್ ನ್ಯಾಯಾಲಯ ಇದನ್ನು ತಿರಸ್ಕರಿಸಿತ್ತು.

Join Whatsapp