ಪತ್ನಿ ಲಕ್ಷ್ಮೀ ಅರುಣಾ ಬಳ್ಳಾರಿ ನಗರದಿಂದ ಸ್ಪರ್ಧೆ: ಜನಾರ್ದನ ರೆಡ್ಡಿ ಘೋಷಣೆ

Prasthutha|

ಬಳ್ಳಾರಿ: ಬಳ್ಳಾರಿ ನಗರ ಕ್ಷೇತ್ರದಿಂದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿಯಾಗಿ ಪತ್ನಿ ಲಕ್ಷ್ಮೀ ಅರುಣಾ ಕಣಕ್ಕಿಳಿಯಲಿದ್ದಾರೆ ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಘೋಷಿಸಿದ್ದಾರೆ.

- Advertisement -

ಅಕ್ರಮ ಗಣಿಗಾರಿಕೆ ಪ್ರಕರಣದ ಆರೋಪಿಯಾಗಿರುವ ಜನಾರ್ದನ ರೆಡ್ಡಿಯವರು ಸುಪ್ರೀಂ ಕೋರ್ಟ್ ಆದೇಶದಿಂದಾಗಿ ಬಳ್ಳಾರಿ ಜಿಲ್ಲೆ ತೊರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜನಾರ್ದನರೆಡ್ಡಿಯವರ ಪತ್ನಿ ಲಕ್ಷ್ಮೀ ಅರುಣಾ ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ.

ಬಳ್ಳಾರಿ ನಗರದಲ್ಲಿ ಜನಾರ್ದನ ರೆಡ್ಡಿ ಸಹೋದರ ಕ್ಷೇತ್ರದ ಶಾಸಕರೂ ಆಗಿರುವ ಜಿ. ಸೋಮಶೇಖರ ರೆಡ್ಡಿ ಬಿಜೆಪಿಯಿಂದ ಸ್ಪರ್ಧಿಸಲಿದ್ದಾರೆ ಎನ್ನಲಾಗುತ್ತಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ತಮ್ಮ ಅಭ್ಯರ್ಥಿಗಳ ಹೆಸರನ್ನು ಇನ್ನೂ ಅಂತಿಮಗೊಳಿಸಿಲ್ಲ.

Join Whatsapp