Home ಟಾಪ್ ಸುದ್ದಿಗಳು ಕುರ್ಕುರೆ ತಂದಿಲ್ಲ ಎಂದು ಗಂಡನಿಗೆ ಡಿವೋರ್ಸ್ ನೀಡಲು ಮುಂದಾದ ಪತ್ನಿ..!

ಕುರ್ಕುರೆ ತಂದಿಲ್ಲ ಎಂದು ಗಂಡನಿಗೆ ಡಿವೋರ್ಸ್ ನೀಡಲು ಮುಂದಾದ ಪತ್ನಿ..!

ಆಗ್ರಾ: ತನ್ನ ಪತಿ 5 ರೂಪಾಯಿ ಕುರ್ಕುರೆ ಚಿಪ್ಸ್ ತರಲಿಲ್ಲ ಎಂಬ ಕಾರಣಕ್ಕೆ ಪತ್ನಿ ಆತನ ವಿರುದ್ಧ ಡಿವೋರ್ಸ್ ಕೊಡಲು ಮುಂದಾಗಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ಬೆಳಕಿಗೆ ಬಂದಿದೆ.


ಕಳೆದ ವರ್ಷ (2023 ರಲ್ಲಿ) ವಿವಾಹವಾಗಿದ್ದ ಈ ಜೋಡಿ ಕೇವಲ ಒಂದು ವರ್ಷದಲ್ಲೇ ವಿಚ್ಛೇಧನ ನೀಡಲು ಮುಂದಾಗಿದ್ದಾರೆ. ಪತಿ ತನಗೆ ಹೊಡೆಯುತ್ತಾನೆ ಎಂದು ಹೆಂಡತಿ ಹೇಳಿದರೆ,5 ರೂಪಾಯಿ ಬೆಲೆಯ ಕುರ್ಕುರೆಗೆ ಹೆಂಡತಿ ಜಗಳವಾಡಿದ್ದಾಳೆ. ಕುರ್ಕುರೆ ಸಿಗದಿದ್ದಾಗ ಆಕೆಯ ತಾಯಿಯ ಮನೆಗೆ ಹೋಗಿದ್ದಾಳೆ ಎಂದು ಪತಿ ಹೇಳಿದ್ದಾನೆ.


ಮಹಿಳೆಯ ದೂರನ್ನು ಫ್ಯಾಮಿಲಿ ಕೌನ್ಸೆಲಿಂಗ್ ಸೆಲ್ ಗೆ ವರ್ಗಾಯಿಸಲಾಗಿದ್ದು,ಪತಿ-ಪತ್ನಿಯನ್ನು ಕೌನ್ಸೆಲಿಂಗ್ ಗಾಗಿ ಸೆಲ್ ಗೆ ಕರೆಸಲಾಗಿತ್ತು. ಈ ವೇಳೆ ಇವರಿಬ್ಬರ ನಡುವಿನ ಜಗಳಕ್ಕೆ 5 ರೂ. ಕುರ್ಕುರೆ ಕಾರಣ ಎಂದು ತಿಳಿದುಬಂದಿದೆ.

Join Whatsapp
Exit mobile version