ವನ್ಯ ಪ್ರಾಣಿಗಳ ದಾಳಿ | ಈ ವರ್ಷದ ಮೊದಲಾರ್ಧದಲ್ಲಿ 28 ಜನ ಮೃತ್ಯು: ಸಚಿವ ಈಶ್ವರ್ ಖಂಡ್ರೆ

Prasthutha|

ಬೆಂಗಳೂರು: ವನ್ಯ ಪ್ರಾಣಿಗಳ ದಾಳಿಯಿಂದ ರಾಜ್ಯದಲ್ಲಿ ಕಳೆದ 15 ದಿನಗಳಲ್ಲಿ 11 ಜನ ಮೃತಪಟ್ಟಿದ್ದಾರೆ. ಈ ವರ್ಷದ ಮೊದಲಾರ್ಧದಲ್ಲಿ 28 ಜನ ಮೃತ ಪಟ್ಟಿದ್ದಾರೆ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.

- Advertisement -


ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಿನ್ನೆ (ಸೆ.04) ಮತ್ತೊಂದು ದುರ್ಘಟನೆ ಸಂಭವಿಸಿದೆ. ಹುಲಿ ದಾಳಿಯಿಂದ ಚರಣ್ ನಾಯ್ಕ್ ಮೃತಪಟ್ಟಿದ್ದಾರೆ. ಮೂರು ದಿನಗಳ ಹಿಂದೆ ವೆಂಕಟೇಶ್ ಆನೆ ತುಳಿತಕ್ಕೆ ಬಲಿಯಾಗಿದ್ದಾರೆ. ಮಾನವ ಪ್ರಾಣಿ ಸಂಘರ್ಷದ ಬಗ್ಗೆ ಚರ್ಚೆ ಮಾಡಿದ್ದೇವೆ. ಜೀವಹಾನಿ ಆಗದಂತೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ಆಗಿದೆ ಎಂದು ಈಶ್ವರ್ ಖಂಡ್ರೆ ಹೇಳಿದರು.


ಈ ಬಗ್ಗೆ ಇಂದು (ಸೆ.05) ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಸಭೆ ಇದೆ. ಜನವಸತಿ ಪ್ರದೇಶಕ್ಕೆ ಆನೆ ಬರದಂತೆ ತಡೆಯಲು 640 ಕಿಮೀ ರೈಲ್ವೆ ಬ್ಯಾರಿಕೇಡ್ ಹಾಕಬೇಕಿದೆ. ಹೆಚ್ಚುವರಿ 300 ಕಿಮೀ ರೈಲ್ವೆ ಬ್ಯಾರಿಕೇಡ್ ಹಾಕಲು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಿದ್ದೇನೆ. 1000 ಕಿಮೀ ಸೋಲಾರ್ ತಂತಿ ಅಳವಡಿಸಲಾಗಿದೆ. 7 ಎಲಿಫೆಂಟಾ ಟಾಸ್ಕ್ ಫೋರ್ಸ್ ಗಳನ್ನು ರಚನೆ ಮಾಡಿದ್ದೇವೆ. ಇದರಲ್ಲಿ 38 ಜನ ನುರಿತವರು ಇರುತ್ತಾರೆ ಎಂದರು ತಿಳಿಸಿದರು.



Join Whatsapp