ಚಿಕ್ಕಮಗಳೂರು: ಮೂರು ತಿಂಗಳಲ್ಲಿ ಮೂವರನ್ನು ಬಲಿ ತೆಗೆದುಕೊಂಡಿದ್ದ ಕಾಡಾನೆಯನ್ನು ಸೆರೆ ಹಿಡಿಯಲಾಗಿದೆ.
ಮೂಡಿಗೆರೆ ತಾಲೂಕಿನ ತಳವಾರ ಗ್ರಾಮದಲ್ಲಿ ಕಳೆದ ಮೂರು ತಿಂಗಳಲ್ಲಿ ಮೂವರನ್ನು ಬಲಿ ತೆಗೆದುಕೊಂಡಿದ್ದ ಕಾಡಾನೆಗಳನ್ನು ಸರೆಹಿಡಿಯಲು ರಾಜ್ಯ ಸರ್ಕಾರ ಅನುಮತಿ ನೀಡಿತ್ತು. ಐದು ದಿನಗಳ ಹಿಂದೆ ಮೊದಲ ಕಾಡಾನೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿದಿದ್ದರು. ಇದೀಗ 2ನೇ ಕಾರ್ಯಾಚರಣೆಯಲ್ಲಿ ಮತ್ತೊಂದು ಆನೆಯನ್ನು ಸೆರೆ ಹಿಡಿಯಲಾಗಿದೆ.
5 ಸಾಕಾನೆಗಳಿಂದ ಸತತ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ ಮತ್ತೊಂದು ಪುಂಡಾನೆಗಾಗಿ ಕಾರ್ಯಾಚರಣೆ ಮುಂದುವರಿದಿದೆ.
ಸದ್ಯ ಎರಡು ಪುಂಡಾನೆ ಸೆರೆಯಿಂದ ಕಾಫಿನಾಡಿಗರು ನಿಟ್ಟಿಸಿರು ಬಿಟ್ಟಿದ್ದಾರೆ.