ಕಾರ್ಯಾಚರಣೆ ವೇಳೆ ಅರಣ್ಯ ಇಲಾಖೆ ಸಿಬ್ಬಂದಿಯನ್ನು ಅಟ್ಟಾಡಿಸಿದ ಕಾಡಾನೆ

Prasthutha|

ಕೊಡಗು: ಸಿದ್ದಾಪುರ ಭಾಗದಲ್ಲಿ ಉಪಟಳ ನೀಡುತ್ತಿದ್ದ ಕಾಡಾನೆ ಸೆರೆಯ ಕಾರ್ಯಾಚರಣೆ ವೇಳೆ ಕಾಡಾನೆಯೊಂದು ಅರಣ್ಯ ಇಲಾಖೆ ಸಿಬ್ಬಂದಿಯನ್ನು ಅಟ್ಟಾಡಿಸಿದ್ದು, ಇದರಿಂದಾಗಿ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

- Advertisement -


ಕರಡಿಗೋಡು ಭಾಗದಲ್ಲಿ ಕಳೆದ ಹಲವು ತಿಂಗಳುಗಳಿಂದ ತೋಟದಲ್ಲಿ ಬೀಡುಬಿಟ್ಟು, ಕೃಷಿ ಫಸಲು‌ ನಾಶ ಮಾಡುತ್ತಿದ್ದ ಹಾಗೂ ಮಾನವನ ಮೇಲೆ ದಾಳಿಗೆ ಮುಂದಾಗುತ್ತಿದ್ದ ಸಲಗ ಸೆರೆಗೆ ಸ್ಥಳೀಯರು ಒತ್ತಾಯ ಮಾಡಿದ್ದರು. ಕಾಡಾನೆ ಸೆರೆಗೆ ಅರಣ್ಯ ಇಲಾಖೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದ್ದು, ವಿರಾಜಪೇಟೆ ವಲಯದಲ್ಲಿ ಉಪಟಳ ನೀಡುತ್ತಿದ್ದ 4 ಕಾಡಾನೆ ಸೆರೆಗೆ ಅನುಮತಿ ದೊರೆತಿದೆ.


ಮೊದಲ ಹಂತದಲ್ಲಿ ಸಿದ್ದಾಪುರದ ಕರಡಿಗೋಡು ಭಾಗದಲ್ಲಿ ಕಾರ್ಯಾಚರಣೆ ಆರಂಭಿಸಲಾಗಿದ್ದು, ದುಬಾರೆ ಸಾಕಾನೆ ಶಿಬಿರದ ಸಾಕಾನೆಗಳಾದ ಧನಂಜಯ, ಪ್ರಶಾಂತ, ಸುಗ್ರೀವ, ಮತ್ತಿಗೋಡು ಸಾಕಾನೆ ಶಿಬಿರದ ಅಭಿಮನ್ಯು, ಭೀಮ ಆನೆಗಳು ಕಾರ್ಯಾಚರಣೆಗಾಗಿ ಬಂದಿವೆ.

Join Whatsapp