ಪದಾಧಿಕಾರಿಗಳ ನೇಮಕಕ್ಕೆ ವೀಕ್ಷಕರ ನೇಮಕ: ಡಿ.ಕೆ. ಶಿವಕುಮಾರ್

Prasthutha: June 30, 2021

ಬೆಂಗಳೂರು: ‘ಪಕ್ಷದ ಜಿಲ್ಲಾಧ್ಯಕ್ಷರು ಹಾಗೂ ಪದಾಧಿಕಾರಿಗಳ ನೇಮಕ ಸಂಬಂಧ ವೀಕ್ಷಕರ ನೇಮಕ ಮಾಡಲಾಗುತ್ತದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

ಸದಾಶಿವನಗರ ನಿವಾಸದ ಬಳಿ ಗುರುವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್ ಅವರು, ‘ಈ ವಿಚಾರವಾಗಿ ಜಿಲ್ಲಾಧ್ಯಕ್ಷರು, ಶಾಸಕರುಗಳಿಗೆ ಸೂಚನೆ ನೀಡಿದ್ದು, ಅವರ ಅಭಿಪ್ರಾಯ ಪಡೆಯುತ್ತೇವೆ.

ಒಂದೆರಡು ದಿನಗಳಲ್ಲಿ ವೀಕ್ಷಕರ ನೇಮಕ ಮಾಡಲಾಗುತ್ತದೆ. ವೀಕ್ಷಕರುಗಳು ಎಲ್ಲ ಜಿಲ್ಲೆಗಳಿಗೂ ಭೇಟಿ ನೀಡಲಿದ್ದಾರೆ. ಕೆಲವು ಕಡೆಗಳಲ್ಲಿ ಒಂದಷ್ಟು ವಿಚಾರಗಳನ್ನು ಇತ್ಯರ್ಥ ಮಾಡಬೇಕಿದೆ. ಅವುಗಳನ್ನು ಪರಿಶೀಲಿಸಿ ಸರಿಪಡಿಸುತ್ತೇನೆ’ ನಾನು ಕೂಡ ಕೆಲವು ಕಡೆ ಹೋಗುತ್ತೇನೆ. ಅದಕ್ಕೆ ಮೊದಲು ಒಂದಷ್ಟು ವಿಚಾರಗಳನ್ನು ಅಂತಿಮಗೊಳಿಸಲಾಗುವುದು ಎಂದರು.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ