ಜೈಲಿನಲ್ಲಿದ್ದಾಗ ಕೆಟ್ಟದಾಗಿ ನಡೆಸಿಕೊಂಡ ಬಗ್ಗೆ ಪ್ರಧಾನಿಗೆ ದೂರು: ಸಂಸದೆ ನವನೀತ್ ರಾಣಾ

Prasthutha|

ಮುಂಬೈ: ಇತ್ತೀಚೆಗೆ ಜೈಲಿನಲ್ಲಿದ್ದಾಗ ಮಹಾರಾಷ್ಟ್ರದ ಅಧಿಕಾರಿಗಳು ತಮ್ಮನ್ನು ಅತ್ಯಂತ ಕೆಟ್ಟದಾಗಿ ನಡೆಸಿಕೊಂಡಿದ್ದಾರೆ. ಇದರ ವಿರುದ್ಧ ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ದೂರು ನೀಡುವುದಾಗಿ ಹನುಮಾನ್ ಚಾಲೀಸಾ ಪ್ರಕರಣದಲ್ಲಿ ಬಂಧಿತರಾಗಿರುವ ಸಂಸದೆ ನವನೀತ್ ರಾಣಾ ಹಾಗೂ ಅವರ ಪತಿ ರವಿ ರಾಣಾ ತಿಳಿಸಿದ್ದಾರೆ.

- Advertisement -

ಈ ಕುರಿತು ಸುದ್ದಿಗಾರರೊಂದಿದೆ ಮಾತನಾಡಿದ ಸಂಸದೆ ನವನೀತ್ ರಾಣಾ, ಬಿಜೆಪಿ ಬೆನ್ನಿಗೆ ಚೂರಿ ಹಾಕಿದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಂದ ನಾವು ನೈತಿಕ ಪಾಠ ಕಲಿಯಬೇಕಾಗಿಲ್ಲ ಎಂದು ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡುವ ಮೂಲಕ ನ್ಯಾಯಾಂಗ ನಿಂದನೆ ಮಾಡಿದ್ದಾರೆ ಎಂಬ ಆರೋಪವನ್ನು ಸಂಸದೆ ರಾಣಾ ತಳ್ಳಿ ಹಾಕಿದ್ದಾರೆ.



Join Whatsapp