Home ಟಾಪ್ ಸುದ್ದಿಗಳು ವರುಣ್ ಗಾಂಧಿ ಕಾಂಗ್ರೆಸ್ ಸೇರ್ಪಡೆಯಾದರೆ ಸಂತೋಷ: ಅಧೀರ್ ರಂಜನ್ ಚೌಧರಿ

ವರುಣ್ ಗಾಂಧಿ ಕಾಂಗ್ರೆಸ್ ಸೇರ್ಪಡೆಯಾದರೆ ಸಂತೋಷ: ಅಧೀರ್ ರಂಜನ್ ಚೌಧರಿ

ಬಾರಾಂಪುರ: ಗಾಂಧಿ ಕುಟುಂಬದೊಂದಿಗೆ ವರುಣ್ ಗಾಂಧಿ ಅವರು ಸಂಪರ್ಕ ಹೊಂದಿದ್ದಾರೆಂಬ ಕಾರಣಕ್ಕೆ ಟಿಕೆಟ್ ನೀಡಲಿಲ್ಲ. ವರುಣ್ ಗಾಂಧಿ ಕಾಂಗ್ರೆಸ್ ಸೇರ್ಪಡೆಯಾದರೆ ನಮಗೆ ಸಂತೋಷ’ ಎಂದು ಕಾಂಗ್ರೆಸ್ ಹಿರಿಯ ನಾಯಕ ಅಧೀರ್ ರಂಜನ್ ಚೌಧರಿ ಹೇಳಿದ್ದಾರೆ.


ವರುಣ್ ಗಾಂಧಿ ಒಬ್ಬ ಪ್ರಬಲ ನಾಯಕ. ವಿದ್ಯಾವಂತ ಕೂಡ. ರಾಜಕೀಯದಲ್ಲಿ ಕ್ಲೀನ್ ಇಮೇಜ್ ಹೊಂದಿದ್ದಾರೆ. ಅಂತಹ ನಾಯಕನಿಗೆ ಬಿಜೆಪಿ ಟಿಕೆಟ್ ನಿರಾಕರಿಸಿದೆ. ಗಾಂಧಿ ಕುಟುಂಬದೊಂದಿಗೆ ವರುಣ್ ಅವರು ಸಂಪರ್ಕ ಹೊಂದಿದ್ದಾರೆಂಬ ಕಾರಣಕ್ಕೆ ಟಿಕೆಟ್ ನೀಡಲಿಲ್ಲ. ವರುಣ್ ಗಾಂಧಿ ಕಾಂಗ್ರೆಸ್ ಸೇರ್ಪಡೆಯಾದರೆ ನಮಗೆ ಸಂತೋಷ ಎಂದರು.

ವರುಣ್ ಗಾಂಧಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಹೋದರ ಸಂಬಂಧಿಗಳಾಗಿದ್ದಾರೆ. ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರದಿಂದ ಎರಡು ಬಾರಿ ಸಂಸದರಾಗಿ ಆಯ್ಕೆಯಾಗಿರುವ ವರುಣ್ ಗಾಂಧಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಆಡಳಿತ ವೈಖರಿಯ ಬಗ್ಗೆ ಆಗಾಗ್ಗೆ ಅಸಮಾಧಾನ ಹೊರಹಾಕುತ್ತಿದ್ದರು. ಈ ಬಾರಿ ಪಿಲಿಭಿತ್ನಿಂದ ಮಾಜಿ ಕಾಂಗ್ರೆಸ್ ಸದಸ್ಯ ಜಿತಿನ್ ಪ್ರಸಾದ್ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ.

Join Whatsapp
Exit mobile version