ಬೆಂಗಳೂರು: ಮಾಜಿ ಸಚಿವ ಗಾಲಿ ಜನಾರ್ಧನರೆಡ್ಡಿಯವರನ್ನು ಬಿಜೆಪಿಗೆ ಕರೆ ತರಲು ಪ್ರಯತ್ನಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯಾದ್ಯಂತ ಪಕ್ಷ ಸಂಘಟನೆ ನನ್ನ ಮೊದಲ ಆದ್ಯತೆ. ಕೇಂದ್ರದ ವರಿಷ್ಠ ನಾಯಕರು ಅತ್ಯಂತ ಮಹತ್ವದ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಯನ್ನು ನನಗೆ ನೀಡಿದ್ದಾರೆ.ಈ ಹುದ್ದೆಯ ಮಹತ್ವವನ್ನು ಅರಿತುಕೊಂಡು ಪಕ್ಷದ ಹಿರಿಯ ನಾಯಕರು ಹಾಗು ಎಲ್ಲರನ್ನೂ ಒಗ್ಗೂಡಿಸಿಕೊಂಡು ಪಕ್ಷದ ಬಲವರ್ಧನೆಗೆ ಶ್ರಮಿಸುತ್ತೇನೆ ಎಂದು ಹೇಳಿದ್ದಾರೆ.
ಸಣ್ಣಪುಟ್ಟ ಅಸಮಾಧಾನ ಸಹಜ. ಬಸವವನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿ ಹೊಳಿ, ಅರವಿಂದ್ ಬೆಲ್ಲದ್ ಅವರು ಕೂಡ ತಮ್ಮ ಅಭಿಪ್ರಾಯ ತಿಳಿಸಿದ ನಂತರವಷ್ಟೇ ಬಿಜೆಪಿ ಸಭೆಯಿಂದ ಹೊರ ನಡೆದಿದ್ದಾರೆ. ಅವರೆಲ್ಲರೂ ನಮ್ಮ ಪಕ್ಷದ ಹಿರಿಯ ನಾಯಕರು. ಅವರನ್ನು ಶೀಘ್ರದಲ್ಲೇ ಭೇಟಿ ಮಾಡಿ ಮಾತುಕತೆ ನಡೆಸುತ್ತೇನೆ.ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುವ ಕೆಲಸ ಮಾಡುತ್ತೇನೆ.ಮಾಜಿ ಸಚಿವ ಗಾಲಿ ಜನಾರ್ಧನರೆಡ್ಡಿಯವರನ್ನು ಬಿಜೆಪಿಗೆ ಕರೆ ತರಲು ಪ್ರಯತ್ನಿಸುತ್ತೇನೆ ಎಂದು ಹೇಳಿದ್ದಾರೆ.