CAA ಜಾರಿ ಮಾಡಿದ್ದನ್ನು ಸುಪ್ರೀಂಕೋರ್ಟ್’ನಲ್ಲಿ ಪ್ರಶ್ನಿಸುತ್ತೇವೆ: SDPI

Prasthutha|

ಹೊಸದಿಲ್ಲಿ: ವಿವಾದಿತ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಅನ್ನು ಜಾರಿಗೊಳಿಸುವ ಕೇಂದ್ರ ಸರ್ಕಾರದ ಕ್ರಮವನ್ನು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಲು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ನಿರ್ಧರಿಸಿದೆ.

- Advertisement -


ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಎಸ್ ಡಿಪಿಐ, ಸಿಎಎ ಭಾರತದ ಕಲ್ಪನೆ ಮತ್ತು ವೈವಿಧ್ಯತೆಯಲ್ಲಿ ಏಕತೆಯ ಪರಿಕಲ್ಪನೆಗೆ ವಿರುದ್ಧವಾಗಿದೆ. ಚುನಾವಣೆಗೂ ಮುನ್ನವೇ ಕಾಯ್ದೆ ಜಾರಿಗೆ ಸೂಚನೆ ನೀಡುವ ಮೂಲಕ ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಮತ ಗಳಿಸಲು ಬಿಜೆಪಿ ಒಡೆದು ಆಳುವ ಕೊಳಕು ರಾಜಕಾರಣ ಮಾಡುತ್ತಿದೆ. ಈ ತಾರತಮ್ಯ ಕಾಯ್ದೆ ದೇಶದ ಸಮಗ್ರತೆಗೆ ಹಾನಿಕರ. ಈ ಹಿನ್ನೆಲೆಯಲ್ಲಿ ಪಕ್ಷವು ಈ ವಿಭಜಕ ಮತ್ತು ತಾರತಮ್ಯ ಕಾಯ್ದೆಯ ಅನುಷ್ಠಾನವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಅನ್ನು ಸಂಪರ್ಕಿಸಲು ನಿರ್ಧರಿಸಿದೆ ಎಂದು ಹೇಳಿದೆ.

Join Whatsapp