Home ಟಾಪ್ ಸುದ್ದಿಗಳು ಅಗತ್ಯಬಿದ್ದರೆ ಶಿವಮೊಗ್ಗದಿಂದ ಸ್ಪರ್ಧೆ ಮಾಡುವೆ: ಕೆ.ಎಸ್.ಈಶ್ವರಪ್ಪ

ಅಗತ್ಯಬಿದ್ದರೆ ಶಿವಮೊಗ್ಗದಿಂದ ಸ್ಪರ್ಧೆ ಮಾಡುವೆ: ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಪುತ್ರನಿಗೆ ಟಿಕೆಟ್ ಸಿಗದೇ ಇದ್ದಲ್ಲಿ ಶುಕ್ರವಾರ ಶಿವಮೊಗ್ಗದಲ್ಲಿ ಬೆಂಬಲಿಗರು ಸಭೆ ಕರೆದಿದ್ದು, ಅಲ್ಲಿ ತೆಗೆದುಕೊಳ್ಳುವ ತೀರ್ಮಾನದಂತೆ ಮುಂದುವರೆಯುವೆ ಎಂದು ಹೇಳಿದರು.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುತ್ರನಿಗೆ ಟಿಕೆಟ್ ಪಡೆಯುವುದರ ಹಿಂದೆ ಬರೀ ನನ್ನ ರಾಜಕೀಯ ಭವಿಷ್ಯ ಅಡಗಿಲ್ಲ. ಬದಲಿಗೆ ಬಿಜೆಪಿಯ ಭವಿಷ್ಯ ಅಡಗಿದೆ. ಪಕ್ಷ ಉಳಿಸುವ ನಿಟ್ಟಿನಲ್ಲಿ ಆಗಿರುವ ತಪ್ಪುಗಳನ್ನು ಸರಿಪಡಿಸುವ ಕೆಲಸವೂ ಇದರ ಹಿಂದೆ ಇದೆ ಎಂದರು.


ಹಾವೇರಿ ಲೋಕಸಭಾ ಕ್ಷೇತ್ರದಿಂದ ನನಗೆ ಟಿಕೆಟ್ ಕೊಟ್ಟರೆ ಸ್ಪರ್ಧಿಸುವುದಿಲ್ಲ. ಬೆಂಬಲಿಗರ ಒತ್ತಾಯವೂ ಇರುವುದರಿಂದ ಅಗತ್ಯ ಬಿದ್ದರೆ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸುವೆ ಎಂದು ಹೇಳಿದರು.

Join Whatsapp
Exit mobile version