ಬೆಂಗಳೂರು: ರಾಜ್ಯದ 224 ವಿಧಾನ ಸಭಾ ಕ್ಷೇತ್ರಗಳಲ್ಲಿ ತಮ್ಮ ಪಕ್ಷದ ಅಭ್ಯರ್ಥಿ ಗಳನ್ನು ಕಣಕ್ಕಿಳಿಸುವ ಕುರಿತಂತೆ ರಾಜ್ಯ ಹಿಂದೂ ಮಹಾಸಭಾ ನಿರ್ಧಾರ ಕೈಗೊಂಡಿದೆ.
ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಮಹಾಸಭೆಯ ಕಾರ್ಯಕಾರಿಣಿ ಸಭೆಯ ಬಳಿಕ ಈ ವಿಷಯ ತಿಳಿಸಿದ ಮಹಾಸಭಾದ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್, ಕಳೆದ ಅನೇಕ ವರ್ಷಗಳಿಂದ ಭಾರತೀಯ ಜನತಾ ಪಕ್ಷಕ್ಕೆ ಹಿಂದೂ ಮಹಾಸಭಾ ಬೆಂಬಲ ಸೂಚಿಸಿಕೊಂಡು ಬರುತಿತ್ತು. ಆದರೆ ಪ್ರಸ್ತುತ ಬಿಜೆಪಿ ಹಿಂದೂ ಕಾರ್ಯಕರ್ತರಿಗೆ ದ್ರೋಹವೆಸಗುವ ಕೆಲಸ ಮಾಡಿಕೊಂಡು ಬರುತ್ತಿದೆ. ಕೇವಲ ಒಟ್ ಬ್ಯಾಂಕ್ ರಾಜಕಾರಣಕ್ಕಾಗಿ ಮಾತ್ರ ಹಿಂದೂ ಕಾರ್ಯಕರ್ತರನ್ನು ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದರು.
ಭಾರತೀಯ ಜನತಾ ಪಕ್ಷ ಭ್ರಷ್ಟಾಚಾರ ಜನತಾ ಪಕ್ಷವಾಗಿದ್ದು. ಕಾಂಗ್ರೆಸ್ ಪಕ್ಷವನ್ನು ಸೋಲಿಸುವ ಒಂದೇ ಉದ್ದೇಶದಿಂದ ಎಸ್ ಡಿ ಪಿ ಐ ಪಕ್ಷವನ್ನು ನೇರವಾಗಿ ಬೆಂಬಲಿಸುತ್ತಿದೆ. ತಾನೇ ಬೆಳೆಸಿದ ಸೋಶಿಯಲ್ ಡೆಮಾಕ್ರಟಿಕ್ ಪೀಪಲ್ ಪಕ್ಷ ಬಿಜೆಪಿಯನ್ನು ಮೀರಿ ಬೆಳೆದಿದೆ. ಅದರ ನಿಯಂತ್ರಣಕ್ಕೆ ಸಿಗುತ್ತಿಲ್ಲ ಎಂದು ತಿಳಿಸಿದರು.