ಕೊಲ್ಕತ್ತಾ: ಇಂಡಿಯಾ ಮಿತ್ರಕೂಟಕ್ಕೆ ಭಾರೀ ದೊಡ್ದ ಹಿನ್ನಡೆಯಾಗಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ.
ತೃಣಮೂಲ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಮಾತ್ರ ತಮ್ಮ ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಹೇಳಿದ್ದಾರೆ.
“ನಾನು ಅವರಿಗೆ ನೀಡಿದ ಎಲ್ಲ ಪ್ರಸ್ತಾವನೆಗಳನ್ನೂ ಅವರು ತಿರಸ್ಕರಿಸಿದ್ದಾರೆ. ಹೀಗಾಗಿ ನಾವು ಪಶ್ಚಿಮ ಬಂಗಾಳದಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವ ನಿರ್ಧಾರಕ್ಕೆ ಬಂದಿದ್ದೇವೆ” ಎಂದು ಮಮತಾ ಬ್ಯಾನರ್ಜಿ ಸ್ಪಷ್ಟಪಡಿಸಿದ್ದಾರೆ.