ಪಕ್ಷ ತೀರ್ಮಾನಿಸಿದರೆ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುತ್ತೇನೆ: ಮಹಾದೇವಪ್ಪ

Prasthutha|

ಮೈಸೂರು : ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲು ನಾನು ಯೋಚನೆ ಮಾಡಿಲ್ಲ. ಆದರೆ ಪಕ್ಷ ತೀರ್ಮಾನ ಮಾಡಿದರೆ ಸ್ಪರ್ಧೆ ಮಾಡುತ್ತೇನೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್ ಸಿ ಮಹಾದೇವಪ್ಪ ಹೇಳಿಕೆ ನೀಡಿದ್ದಾರೆ.

- Advertisement -


ಇಂದು ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ನಾನು ಸ್ಪರ್ಧೆ ಮಾಡುವ ಯೋಚನೆ ಮಾಡಿಲ್ಲ. ಆದರೆ ಪಕ್ಷ ತೀರ್ಮಾನ ಮಾಡಿದರೆ ಸ್ಪರ್ಧೆ ಮಾಡುತ್ತೇನೆ. ಆದರೆ ನಾನು ಆಕಾಂಕ್ಷಿ ಅಲ್ಲ. ಚಾಮರಾಜನಗರದ ಅಭ್ಯರ್ಥಿಯನ್ನ ಕಾಂಗ್ರೆಸ್ ಪಕ್ಷ ಆಯ್ಕೆ ಮಾಡುತ್ತದೆ. ಸುನೀಲ್ ಬೋಸ್ ಕೂಡ ಪಕ್ಷ ತೀರ್ಮಾನ ಮಾಡಿದರೆ ಸ್ಪರ್ಧೆ ಮಾಡುತ್ತಾರೆ. ಏಕೆಂದರೆ ಅವರು ನನ್ನ ಮಗ ಎಂದು ಹೇಳುತ್ತಿಲ್ಲ. ಅವರು ಪಕ್ಷಕ್ಕಾಗಿ ಕೆಲಸ ಮಾಡಿದ್ದಾರೆ ಎಂದು ತಮ್ಮ ಮಗನ ಪರವಾಗಿ ಸಚಿವರು ಬ್ಯಾಟ್ ಬೀಸಿದರು.

Join Whatsapp