Home ರಾಜ್ಯ ಒಳ ಮೀಸಲಾತಿ ಕುರಿತು ಹೈಕಮಾಂಡ್ ಜತೆ ಚರ್ಚೆ: ಸಿದ್ದರಾಮಯ್ಯ

ಒಳ ಮೀಸಲಾತಿ ಕುರಿತು ಹೈಕಮಾಂಡ್ ಜತೆ ಚರ್ಚೆ: ಸಿದ್ದರಾಮಯ್ಯ

ರಾಯಚೂರು: ‘ಒಳ ಮೀಸಲಾತಿ ವಿಷಯದಲ್ಲಿ ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಳ್ಳಲಾಗದು. ಇದು ಇಡೀ ರಾಜ್ಯ ಸಂಬಂಧಿಸಿದ್ದಾಗಿರುವ ಕಾರಣ ಪಕ್ಷದ ಹೈಕಮಾಂಡ್ ಜತೆ ಚರ್ಚಿಸಿದ ನಂತರವೇ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.


ಕಾಂತರಾಜು ಆಯೋಗದ ವರದಿಯನ್ನು ಈಗಾಗಲೇ ಸ್ವೀಕರಿಸಲಾಗಿದ್ದು, ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ವರದಿಯಲ್ಲಿ ಸಣ್ಣ ಪುಟ್ಟ ದೋಷಗಳಿದ್ದರೆ ಅದನ್ನು ಸರಿಪಡಿಸುವ ಬಗ್ಗೆಯೂ ಪರಿಶೀಲಿಸಲಾಗುವುದು’ ಎಂದು ನಗರದಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದರು.


‘ರಾಜ್ಯದ ಕಾಂಗ್ರೆಸ್ನ ವಿವಿಧ ನಾಯಕರು ಪಕ್ಷದ ವರಿಷ್ಠರೊಂದಿಗೆ ಚರ್ಚಿಸುವುದು ಸಹಜ. ಸತೀಶ ಜಾರಕಿಹೊಳಿಯವರೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಹಜವಾಗಿ ಭೇಟಿಯಾಗಿದ್ದಾರೆ. ಅದಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ’ ಎಂದು ತಿಳಿಸಿದರು.

Join Whatsapp
Exit mobile version