ಬೆಂಗಳೂರು: ರೇವಣ್ಣ ವಿಚಾರದಲ್ಲಿ ಮಾತ್ರ ಹೋರಾಟ ಮಾಡುತ್ತೇನೆ. ಪ್ರಜ್ವಲ್ ರೇವಣ್ಣ ಬಗ್ಗೆ ಅಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು.
ಹಲಗೆವಡೇರಹಳ್ಳಿ ಡಿನೋಟಿಫಿಕೇಷನ್ ಆರೋಪ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹೆಚ್ಡಿಕೆ ಹಾಜರಾಗಿದ್ದರು. ಈ ವೇಳೆ ರೇವಣ್ಣ, ಪ್ರಜ್ವಲ್ ರೇವಣ್ಣ ಪ್ರಕರಣ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿ, ಎಸ್ ಐಟಿ ರಚನೆ ಆಗಿದೆ. ಗೃಹ ಸಚಿವರಿಗೆ ಪ್ರಶ್ನೆ ಮಾಡ್ತೀನಿ. ನಿಮ್ಮ ತನಿಖೆ ರೇವಣ್ಣ, ಪ್ರಜ್ವಲ್ ಮೇಲೆ ಯಾಕೆ ಟಾರ್ಗೆಟ್ ಆಗಿದೆ. ವೀಡಿಯೋ ಬಿಡುಗಡೆ ಮಾಡಿದವರನ್ನ ಯಾಕೆ ತನಿಖೆ ಮಾಡ್ತಾ ಇಲ್ಲ. ಮಹಿಳಾ ಆಯೋಗ ಕೂಡ ಪತ್ರ ಬರೆದಿದೆ. ವೀಡಿಯೋ ಲೀಕ್ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಿ ಅಂತ. ಆದರೆ ಇದುವರೆಗೂ ಏನು ಮಾಡಿಲ್ಲ. ಮಿಸ್ಟರ್ ಪರಮೇಶ್ವರ ಏನ್ ಮಾಡ್ತಾ ಇದ್ದಾರೆ ಎಂದು ಪ್ರಶ್ನಿಸಿದರು.