Home ಟಾಪ್ ಸುದ್ದಿಗಳು ಪಂಜಾಬ್ ಮುಖ್ಯಮಂತ್ರಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹಾಕುತ್ತೇನೆ: ರಾಜ್ಯಪಾಲ ಬನ್ವಾರಿ ಲಾಲ್ ಪುರೋಹಿತ್

ಪಂಜಾಬ್ ಮುಖ್ಯಮಂತ್ರಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹಾಕುತ್ತೇನೆ: ರಾಜ್ಯಪಾಲ ಬನ್ವಾರಿ ಲಾಲ್ ಪುರೋಹಿತ್

ನವದೆಹಲಿ: ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಮತ್ತೆ ತಮ್ಮ ವಿರುದ್ಧ ಕೆಟ್ಟಾಗಿ ಮಾತನಾಡಿದ್ದಾರೆ. ಈ ವಿಚಾರವಾಗಿ ಅವರ ವಿರುದ್ಧ ದೂರು ನೀಡುವೇ ಎಂದು ರಾಜ್ಯಪಾಲ ಬನ್ವಾರಿ ಲಾಲ್ ಪುರೋಹಿತ್ ಹೇಳಿದ್ದಾರೆ.


ಸಿಎಂ ಮತ್ತು ರಾಜ್ಯಪಾಲರ ನಡುವೆ ನಡೆಯುತ್ತಿರುವ ವಿವಾದದಿಂದಾಗಿ ಪಂಜಾಬ್ ವಿಧಾನಸಭೆಯಲ್ಲಿ ಅಂಗೀಕಾರವಾದ ವಿಧೇಯಕಗಳು ರಾಜ್ಯಪಾಲರಿಂದ ಅಂಗೀಕಾರವಾಗಿಲ್ಲ ಎಂದು ಹೇಳಲಾಗಿದೆ.


ವಿಧಾನಸೌಧದ ಕಲಾಪದ ವೇಳೆ ಎಲ್ಲರ ಸಮ್ಮುಖದಲ್ಲಿ ಮುಖ್ಯಮಂತ್ರಿಗಳು ತಮ್ಮ ವಿರುದ್ಧ ತಪ್ಪು ಪದಗಳನ್ನು ಬಳಸಿದ್ದಾರೆ ಎಂದು ರಾಜ್ಯಪಾಲರು ಆರೋಪಿಸಿದ್ದಾರೆ. ಮುಖ್ಯಮಂತ್ರಿಗಳು ಸದನದಲ್ಲಿ ಮಾತನಾಡುವಾಗ ರಾಜ್ಯಪಾಲರು ಪತ್ರ ಬರೆಯುತ್ತಲೇ ಇರುತ್ತಾರೆ, ಸೋಮಾರಿ ಎಂಬಿತ್ಯಾದಿ ಪದಗಳನ್ನು ಬಳಸಲಾಗಿದೆ. ಒಬ್ಬ ಮುಖ್ಯಮಂತ್ರಿ ಇಂತಹ ಭಾಷೆ ಬಳಸಬಾರದು ಎಂದು ರಾಜ್ಯಪಾಲರು ಹೇಳಿದ್ದಾರೆ.

Join Whatsapp
Exit mobile version