ಕಾಂಗ್ರೆಸ್‌ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದ ಅಶ್ವತ್ಥನಾರಾಯಣ

Prasthutha|

ಬೆಂಗಳೂರು: ಹೊಂಬಾಳೆ ಎಂಬ ಖಾಸಗಿ ಸಂಸ್ಥೆಯ ಏಜೆಂಟರನ್ನು ಸರ್ಕಾರಿ ಅಧಿಕಾರಿಗಳಂತೆ ಬಿಂಬಿಸಿ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವಿವಿಧ ಕ್ಷೇತ್ರಗಳಲ್ಲಿ ಸಾವಿರಾರು ಮತದಾರರ ವೈಯಕ್ತಿಕ ಮಾಹಿತಿ ಸಂಗ್ರಹಿಸಿದ ಪ್ರಕರಣಕ್ಕೆ ಸಂಬಂದಪಟ್ಟಂತೆ, ಇದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರ ಸಹೋದರನ ಸಂಸ್ಥೆಯಾಗಿದ್ದೆಂದು ಕಾಂಗ್ರೆಸ್ ಆರೋಪಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವಅಶ್ವತ್ಥನಾರಾಯಣ ನನ್ನ ಹೆಸರಿಗೆ ಮಸಿ ಬಳಿಯಲು ಹೊಂಚು ಹಾಕುತ್ತಿರುವ ಇವರೆಲ್ಲರ ಮೇಲೆ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದು ಹೇಳಿದ್ದಾರೆ.

- Advertisement -

ಹೊಂಬಾಳೆ (ಈಗ, ಚಿಲುಮೆ ಟ್ರಸ್ಟ್‌) ಎನ್ನುವ ಸಂಸ್ಥೆಯು ಬಿಬಿಎಂಪಿ ಮತದಾರರ ಪಟ್ಟಿಯನ್ನು ಅಕ್ರಮವಾಗಿ ಪರಿಷ್ಕರಿಸಿದ್ದು, ಇದರ ಹಿಂದೆ ಮುಖ್ಯಮಂತ್ರಿ ಬೊಮ್ಮಾಯಿ ಮತ್ತು ಅಶ್ವತ್ಥನಾರಾಯಣ ಅವರ ಕೈವಾಡವಿದೆ ಎಂದು ಕಾಂಗ್ರೆಸ್ ನಾಯಕರು ಮಾಡಿರುವ ಆರೋಪಕ್ಕೆ ಪ್ರತಿಕ್ರಿಯಿಸಿದ್ದಾರೆ.

ನನ್ನ ಸಹೋದರನದು ಹೊಂಬಾಳೆ ಎನ್ನುವ ಸಂಸ್ಥೆ ಇದ್ದು, ಸಿನಿಮಾ ನಿರ್ಮಾಣದಲ್ಲಿ ತೊಡಗಿದೆ. ಈ ಸಂಸ್ಥೆಯು ಸಿನಿಮಾಗಳನ್ನು ಮಾಡಿ ಗೌರವ ತಂದಿದೆ. ಈಗ ಅವರು ಹೇಳುತ್ತಿರುವ ಹೊಂಬಾಳೆ ಸಂಸ್ಥೆಗೂ ನಮ್ಮ ಸೋದರನ ಸಂಸ್ಥೆಗೂ ಯಾವುದೇ ಸಂಬಂಧವಿಲ್ಲ ಎಂದ್ದಿದ್ದಾರೆ. ನಾನು ತತ್ತ್ವ-ಸಿದ್ಧಾಂತಗಳಿಗಾಗಿ ರಾಜಕೀಯಕ್ಕೆ ಬಂದಿದ್ದೇನೆಯೇ ವಿನಾ ಕಾಂಗ್ರೆಸ್ಸಿನವರಂತೆ ಕುಟುಂಬ ರಾಜಕಾರಣಕ್ಕಲ್ಲ” ಎಂದು ಹೇಳಿದರು.

Join Whatsapp