ರಾಮನಗರ ಹೆಸರು ಬದಲಾವಣೆ ಮಾಡಿದ್ರೆ ಉಪವಾಸ ಸತ್ಯಾಗ್ರಹ: ಕುಮಾರಸ್ವಾಮಿ

Prasthutha|

ಬೆಂಗಳೂರು: ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ಚಿಂತನೆ ನಡೆಸಲಾಗಿದೆ ಎನ್ನುವ ಡಿಕೆ ಶಿವಕುಮಾರ್ ಹೇಳಿಕೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತೀವ್ರವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೇ ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ಮಾಡಿದರೆ ಅಮರಣಾಂತ ಉಪವಾಸ ಸತ್ಯಾಗ್ರಹ ಮಾಡುತ್ತೇನೆ ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

- Advertisement -


ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ರಾಮನಗರ ಜಿಲ್ಲೆಯ ಬಗ್ಗೆ ಡಿಕೆ ಶಿವಕುಮಾರ್ ಹಾಕಿರುವ ಸವಾಲು ಸ್ವೀಕರಿಸುತ್ತೇನೆ ಎಂದು ಹೇಳಿರುವ ಕುಮಾರಸ್ವಾಮಿ, ನನ್ನ ಆರೋಗ್ಯ ಲೆಕ್ಕಿಸದೇ ಉಪವಾಸ ಸತ್ಯಾಗ್ರಹ ಮಾಡುತ್ತೇನೆ. ರಾಮನಗರ ಜೊತೆ ವ್ಯವಹಾರಿಕ ಸಂಬಂಧವಿಲ್ಲ, ಭಾವನಾತ್ಮಕ ಸಂಬಂಧವಿದೆ. ನಾನು ಹಾಸನದಲ್ಲಿ ಹುಟ್ಟಿದ್ದು, ನನ್ನ ಅಂತ್ಯ ರಾಮನಗರದಲ್ಲಿ. ಹೀಗಾಗಿ ನನ್ನ ಕೊನೆಯ ಉಸಿರು ಇರುವ ತನಕ ರಾಮನಗರಕ್ಕಾಗಿ ಹೋರಾಟ ಮಾಡುತ್ತೇನೆ ಎಂದು ಪ್ರತಿಜ್ಞೆ ಮಾಡಿದರು.

Join Whatsapp