Home ಟಾಪ್ ಸುದ್ದಿಗಳು ನನ್ನ ವಿರುದ್ಧ ಒಂದೇ ಒಂದು ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುತ್ತೇನೆ: ಬ್ರಿಜ್ ಭೂಷಣ್ ಶರಣ್ ಸಿಂಗ್

ನನ್ನ ವಿರುದ್ಧ ಒಂದೇ ಒಂದು ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುತ್ತೇನೆ: ಬ್ರಿಜ್ ಭೂಷಣ್ ಶರಣ್ ಸಿಂಗ್

ಲಖನೌ: ನನ್ನ ವಿರುದ್ಧ ಒಂದೇ ಒಂದು ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುತ್ತೇನೆ. ನಿಮ್ಮ ಬಳಿ (ಕುಸ್ತಿಪಟುಗಳು) ಯಾವುದೇ ಪುರಾವೆಗಳಿದ್ದರೆ, ಅದನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಮತ್ತು ಯಾವುದೇ ಶಿಕ್ಷೆಯನ್ನು ಸ್ವೀಕರಿಸಲು ನಾನು ಸಿದ್ಧನಿದ್ದೇನೆ ಎಂದು WFI ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಹೇಳುತ್ತಿರುವ ವೀಡಿಯೊವನ್ನು ಎಎನ್ ಐ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.


ಹರಿದ್ವಾರದಲ್ಲಿ ಜಮಾಯಿಸಿ ಪದಕಗಳನ್ನು ಗಂಗೆಯಲ್ಲಿ ಎಸೆಯುವುದಾಗಿ ಬೆದರಿಕೆ ಹಾಕಿದ ಕುಸ್ತಿಪಟುಗಳಿಗೆ ಪ್ರತಿಕ್ರಿಯಿಸಿದ ಅವರು, ತಮ್ಮ ವಿರುದ್ಧದ ಆರೋಪಗಳ ಬಗ್ಗೆ ದೆಹಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದಿದ್ದಾರೆ. ಮಹಿಳಾ ಕುಸ್ತಿಪಟುಗಳಿಂದ ಲೈಂಗಿಕ ಕಿರುಕುಳದ ಆರೋಪಗಳನ್ನು ಎದುರಿಸುತ್ತಿರುವ ಸಿಂಗ್, ಕುಸ್ತಿಪಟುಗಳು ತಮ್ಮ ಪ್ರಶಸ್ತಿಗಳನ್ನು ನೀರಿಗೆ ಹಾಕುವ ನಿರ್ಧಾರವು ಸಂಪೂರ್ಣವಾಗಿ ಅವರು ತೆಗೆದುಕೊಂಡ ನಿಲುವು ಎಂದು ಹೇಳಿದರು.


ಈ ವಿಷಯವನ್ನು ದೆಹಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆರೋಪದಲ್ಲಿ ಯಾವುದೇ ಸತ್ಯವಿದ್ದರೆ ಅವರು ನನ್ನನ್ನು ಬಂಧಿಸುತ್ತಾರೆ ಎಂದು ಹೇಳಿದ್ದಾರೆ.
ಮಂಗಳವಾರ ಕುಸ್ತಿಪಟುಗಳು ತಮ್ಮ ಪದಕಗಳನ್ನು ಗಂಗೆಗೆ ಬಿಸಾಡಲು ನಿರ್ಧರಿಸಿ ಅಲ್ಲಿಗೆ ಬಂದಿದ್ದರು. ಆದರೆ ಈ ನಿರ್ಧಾರದಿಂದ ಹಿಂದೆ ಸರಿಯುವಂತೆ ಮಾಡಿದ ರೈತ ನಾಯಕ ನರೇಶ್ ಟಿಕಾಯತ್, ಆ ಪದಕಗಳನ್ನು ಕುಸ್ತಿಪಟುಗಳಿಂದ ಪಡೆದುಕೊಂಡಿದ್ದಾರೆ.

Join Whatsapp
Exit mobile version