Home ಟಾಪ್ ಸುದ್ದಿಗಳು ಬಿಜೆಪಿ ಬಿಟ್ಟು ‘ಕೈ’ ಹಿಡಿಯುತ್ತಾರಾ ಹೆಚ್. ವಿಶ್ವನಾಥ್?: ಕುತೂಹಲ ಮೂಡಿಸಿದ ಸಿದ್ದರಾಮಯ್ಯ ಭೇಟಿ

ಬಿಜೆಪಿ ಬಿಟ್ಟು ‘ಕೈ’ ಹಿಡಿಯುತ್ತಾರಾ ಹೆಚ್. ವಿಶ್ವನಾಥ್?: ಕುತೂಹಲ ಮೂಡಿಸಿದ ಸಿದ್ದರಾಮಯ್ಯ ಭೇಟಿ

ಬೆಂಗಳೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಬಿಜೆಪಿ ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಅವರು ಇಂದು ಮಧ್ಯಾಹ್ನ ಶಿವಾನಂದ ವೃತ್ತದ ಸಮೀಪ ಇರುವ ಸಿದ್ದರಾಮಯ್ಯನವರ ಸರ್ಕಾರಿ ನಿವಾಸಕ್ಕೆ ಭೇಟಿ ನೀಡಿದ್ದು, ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.


ಮೂಲಗಳ ಪ್ರಕಾರ, ಸಿದ್ದರಾಮಯ್ಯ ಆರೋಗ್ಯ ವಿಚಾರಿಸಲು ವಿಶ್ವನಾಥ್ ಆಗಮಿಸಿದ್ದಾರೆ. ಆದರೆ, ಬಿಜೆಪಿ ನಾಯಕರ ನಡೆಯಿಂದ ಬೇಸತ್ತಿರುವ ಹೆಚ್. ವಿಶ್ವನಾಥ್ ಕಾಂಗ್ರೆಸ್’ಗೆ ಮರಳಲು ನಿರ್ಧರಿಸಿದ್ದು, ಮೈಸೂರಿನಿಂದಲೇ ತಮ್ಮ ರಾಜಕೀಯ ಚಟುವಟಿಕೆ ಮುಂದುವರಿಸಲು ಯೋಚಿಸಿದ್ದಾರೆ ಎಂದು ಹೇಳಲಾಗುತ್ತಿದೆ.

Join Whatsapp
Exit mobile version