ಈ ತಿಂಗಳ ಅಂತ್ಯದಲ್ಲಿ ಮೂರು ದಿನ ಸತ್ಯಾಗ್ರಹ ಮಾಡುತ್ತೇನೆ: ಬಿಎಸ್ ಯಡಿಯೂರಪ್ಪ

Prasthutha|

ಬೆಂಗಳೂರು: ಈ ತಿಂಗಳ ಅಂತ್ಯದಲ್ಲಿ ಮೂರು ದಿನ ವಿಧಾನಸೌಧ ಅಥವಾ ಫ್ರೀಡಂಪಾರ್ಕ್ ನಲ್ಲಿ ಸತ್ಯಾಗ್ರಹ ಮಾಡ್ತೇನೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ತಿಳಿಸಿದ್ದಾರೆ.

- Advertisement -


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುನಿರತ್ನ ಕ್ಷೇತ್ರದಲ್ಲಿ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ. ಅಭಿವೃದ್ಧಿ ಕೆಲಸಗಳಿಗೆ ಅನುದಾನ ನಿಲ್ಲಿಸಿ ಗೊಂದಲ ಮಾಡಿದ್ದಾರೆ. ರಾಜ್ಯದಲ್ಲಿ ಎಲ್ಲೂ ಕೂಡ ಗುತ್ತಿಗೆದಾರರು ಕೆಲಸ ಮಾಡುತ್ತಿಲ್ಲ. ಹಳೇ ಕೆಲಸಕ್ಕೂ 7ರಿಂದ 8 ಪರ್ಸೆಂಟ್ ಕಮಿಷನ್ ಕೇಳುತ್ತಿದ್ದಾರೆ.

ಈ ರೀತಿಯ ಸೇಡಿನ ರಾಜಕಾರಣ ನಿರೀಕ್ಷೆ ಮಾಡಿರಲಿಲ್ಲ. ಬೆಳಗಾವಿ ಅಧಿವೇಶನಕ್ಕೂ ಮುನ್ನ ಸಾಂಕೇತಿಕ ಸತ್ಯಾಗ್ರಹ ಮಾಡ್ತೇವೆ. ಬೆಳಗಾವಿ ಅಧಿವೇಶನದಲ್ಲಿ ಚರ್ಚಿಸಲು ನಮ್ಮ ಶಾಸಕರಿಗೆ ಹೇಳುತ್ತೇನೆ ಎಂದು ಕಾಂಗ್ರೆಸ್ ವಿರುದ್ಧ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.



Join Whatsapp