Home ಟಾಪ್ ಸುದ್ದಿಗಳು ಲೋಕಸಭೆ ಟಿಕೆಟ್ ಕೊಡದಿದ್ರೆ ನೋವಾಗುತ್ತೆ: ಸದಾನಂದಗೌಡ

ಲೋಕಸಭೆ ಟಿಕೆಟ್ ಕೊಡದಿದ್ರೆ ನೋವಾಗುತ್ತೆ: ಸದಾನಂದಗೌಡ

ಬೆಂಗಳೂರು: ನಾನು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಎಂದು ಬಿಜೆಪಿ ಹಾಲಿ ಸಂಸದ ಡಿ.ವಿ ಸದಾನಂದಗೌಡ ಹೇಳಿದ್ದಾರೆ.


ಈ ಹಿಂದೆ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದರು.


ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಈ ಹಿಂದೆ ಬೇರೆಯವರಿಗೆ ಟಿಕೆಟ್ ಕೊಡಿ ಎಂದು ಹೇಳಿದ್ದೆ. ಕ್ಷೇತ್ರದ ಎಲ್ಲ ಶಾಸಕರು, ಮುಖಂಡರು ನೀವೇ ಸ್ಪರ್ಧಿಸುವಂತೆ ಒತ್ತಾಯ ಮಾಡಿದ್ದಾರೆ. ಇನ್ನೂ ನಾನು ಹತ್ತು ವರ್ಷ ರಾಜಕೀಯದಲ್ಲಿರಬಹುದು. ಒಂದು ವೇಳೆ ನನಗೆ ಟಿಕೆಟ್ ಕೊಡದಿದ್ರೆ, ಸ್ವಲ್ಪ ನೋವಾಗುತ್ತದೆ. ನನಗೆ ಟಿಕೆಟ್ ಸಿಗುವ ವಿಶ್ವಾಸವಿದೆ, ಬಿಜೆಪಿ ನನಗೆ ಎಲ್ಲವೂ ಕೊಟ್ಟಿದೆ ಎಂದಿದ್ದಾರೆ.

Join Whatsapp
Exit mobile version