ಕನಕಪುರವನ್ನು ಬೆಂಗಳೂರಿಗೆ ಸೇರಿಸುತ್ತೇನೆ: ಡಿಕೆ ಶಿವಕುಮಾರ್

Prasthutha|

ರಾಮನಗರ: ಕನಕಪುರ ತಾಲೂಕನ್ನು ಬೆಂಗಳೂರು ಜಿಲ್ಲೆಗೆ ಸೇರಿಸುತ್ತೇನೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

- Advertisement -


ಕನಕಪುರ ತಾಲೂಕಿನ ಶಿವನಹಳ್ಳಿಯಲ್ಲಿ ವೀರಭದ್ರಸ್ವಾಮಿ ದೇವಸ್ಥಾನ ಶಿಲಾ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಯಾರೋ ಹೆಸರು ಮಾಡಿಕೊಳ್ಳುವುದಕ್ಕೆ ರಾಮನಗರ ಜಿಲ್ಲೆ ಮಾಡಿದ್ದಾರೆ. ನಮ್ಮನ್ನು ರಾಮನಗರ ಜಿಲ್ಲೆ ಅಂತಾ ಮೂಲೆಗೆ ತಳ್ಳಬೇಡಿ. ಕನಕಪುರದವರು ಬೆಂಗಳೂರು ಜಿಲ್ಲೆಯವರು ಎಂದರು.

ವಿಜಯದಶಮಿ ದಿನ ಹೇಳುತ್ತಿದ್ದೇನೆ, ಕನಕಪುರ ಬೆಂಗಳೂರು ಜಿಲ್ಲೆಗೆ ಸೇರುತ್ತೆ. ಇಲ್ಲಿನ ಭೂಮಿ ಅಡಿ ಲೆಕ್ಕದಲ್ಲಿ ವ್ಯವಹಾರ ಆಗಲಿದೆ, ಭೂಮಿ ಮಾರಬೇಡಿ ಎಂದರು.

Join Whatsapp