ಮೈಸೂರು: ರಾಜ್ಯ ಆರ್ಥಿಕವಾಗಿ ದಿವಾಳಿಯಾಗಲು ಬಿಜೆಪಿ ಕಾರಣ. ಬಿಜೆಪಿ ಅವಧಿಯ ಅರ್ಥಿಕ ಪರಿಸ್ಥಿತಿ ಬಗ್ಗೆ ಶ್ವೇತಪತ್ರ ಹೊರಡಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮೈಸೂರಿನಲ್ಲಿ ಮಾತನಾಡಿದ ಅವರು, ಸಾಲಮಾಡಿ ಆರ್ಥಿಕವಾಗಿ ರಾಜ್ಯವನ್ನು ದಿವಾಳಿ ಮಾಡಿ ಹೋಗಿದ್ದಾರೆ. ಟೆಂಡರ್ ಕರೆದು 30 ಸಾವಿರ ಕೋಟಿ ರೂ. ಪೆಂಡಿಂಗ್ ಬಿಲ್ ಇದೆ. ಅರ್ಥಿಕ ಪರಿಸ್ಥಿತಿ ಬಗ್ಗೆ ಶ್ವೇತಪತ್ರ ಹೊರಡಿಸುತ್ತೇನೆ ಎಂದರು. ಕೋಟ್ಯಂತರ ರೂ. ಖರ್ಚು ಮಾಡಿ ಆಪರೇಷನ್ ಕಮಲ ಮಾಡಿದವರು, ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗೆ ಇಲ್ಲ ಎಂದು ವಾಗ್ದಾಳಿ ಮಾಡಿದರು.