ಪ್ರೀತಂ ಗೌಡರನ್ನು ಪಾದಯಾತ್ರೆಯಿಂದ ದೂರವಿಡುತ್ತೇವೆ: ಪುಟ್ಟರಾಜು

Prasthutha|

ಮಂಡ್ಯ: ಮಾಜಿ ಶಾಸಕ ಪ್ರೀತಂ ಗೌಡ ಪಾದಯಾತ್ರೆಗೆ ಆಗಮಿಸಿರುವುದು ಬಿಜೆಪಿ ಜೆಡಿಎಸ್ ಕಾರ್ಯಕರ್ತರ ನಡುವೆ ಸಂಘರ್ಷಕ್ಕೆ ಕಾರಣವಾಗಿದೆ. ಬುಧವಾರ ಉಭಯ ಪಕ್ಷಗಳ ಕಾರ್ಯಕರ್ತರು ಕೈಕೈ ಮಿಲಾಯಿಸಿದ್ದರು. ಗುರುವಾರ ಬೆಳಗ್ಗೆ ಪ್ರೀತಂ ಗೌಡ ಫ್ಲೆಕ್ಸ್ ಗೆ ಬೆಂಕಿ ಹಚ್ಚಲಾಗಿದೆ. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ, ಪ್ರೀತಂ ಗೌಡರನ್ನು ಪಾದಯಾತ್ರೆಯಿಂದ ದೂರವಿಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಜೆಡಿಎಸ್ ಮಾಜಿ ಶಾಸಕ ಸಿಎಸ್ ಪುಟ್ಟರಾಜು ತಿಳಿಸಿದ್ದಾರೆ.

- Advertisement -


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರೀತಂ ಗೌಡರಿಗೂ ಬಿಜೆಪಿ ಜೆಡಿಎಸ್ ಮೈತ್ರಿಗೂ ಯಾವುದೇ ಸಂಬಂಧವಿಲ್ಲ. ನಮ್ಮ ಅಭಿಪ್ರಾಯವನ್ನು ಬಿಜೆಪಿ ನಾಯಕರಿಗೆ ತಿಳಿಸಿದ್ದೇವೆ. ಯಾವುದೇ ರೀತಿಯಲ್ಲೂ ಮೈತ್ರಿಗೆ ಭಂಗವಿಲ್ಲ. ಒಂದು ಲಕ್ಷಕ್ಕೂ ಅಧಿಕ ಜನರನ್ನು ಸೇರಿಸಿ ಸಮಾವೇಶ ಮಾಡುತ್ತೇವೆ ಎಂದು ತಿಳಿಸಿದರು.



Join Whatsapp