ಅಂತಾರಾಜ್ಯ ಜಲವಿವಾದ ಬಗ್ಗೆ ದೆಹಲಿಯಲ್ಲಿ ಕಾನೂನು ತಜ್ಞರೊಂದಿಗೆ ಸಭೆ: ಬಸವರಾಜ ಬೊಮ್ಮಾಯಿ

Prasthutha|

ಬೆಂಗಳೂರು: ಻ಅಂತಾರಾಜ್ಯ ಜಲ ವಿವಾದಗಳ ಬಗ್ಗೆ ನವದೆಹಲಿಯಲ್ಲಿ ಕಾನೂನು ತಜ್ಞರ ಜತೆ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಂಗಳೂರಿನ ತಮ್ಮ ನಿವಾಸದ ಬಳಿ ಅವರು ಮಾಧ್ಯಮದವರೊಂದಿಗೆ ಮಾತನಾಡಿದ ಅವರು ರಾಜ್ಯ ಸರ್ಕಾರದ ಅಡ್ವೋಕೇಟ್ ಜನರಲ್, ರಾಜ್ಯದ ಹಿರಿಯ ವಕೀಲರು, ಕಾನೂನು ತಜ್ಞರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ರಾಜ್ಯದ ನೀರಾವರಿ ವಿವಾದದ ಬಗ್ಗೆ ರಾಜ್ಯದ ಮುಂದಿನ ನಡೆಯ ಬಗ್ಗೆ ಈ ಸಭೆಯಲ್ಲಿ ತೀರ್ಮಾನಿಸಲಾಗುವುದು. ಕರ್ನಾಟಕದ ನೆಲ, ಜಲ, ಭಾಷೆಯ ಹಿತರಕ್ಷಣೆ ಗೆ ಸರ್ವ ಪ್ರಯತ್ನ ಮಾಡಲಾಗುವುದು, ಈ ವಿಷಯದಲ್ಲಿ ಯಾವುದೇ ರೀತಿಯ ಆತಂಕ ಬೇಡ ಎಂದು ಈ ಸಂದರ್ಭದಲ್ಲಿ ತಿಳಿಸಿದರು.


ಇದೆ ತಿಂಗಳ 25 ನೇ ತಾರೀಖಿನಂದು ನವದೆಹಲಿಗೆ ತೆರಳಿ 26 ರಂದು ಎಲ್ಲ ಕೇಂದ್ರ ಸಚಿವರನ್ನು ಭೇಟಿ ಮಾಡಿ ರಾಜ್ಯದ ಅಭಿವೃದ್ಧಿಯ ಬಗ್ಗೆ ಚರ್ಚಿಸಲಾಗುವುದು ಎಂದು ತಿಳಿಸಿದರು. ಕೇಂದ್ರ ಆರೋಗ್ಯ, ಹಣಕಾಸು, ಜಲಶಕ್ತಿ , ಕೃಷಿ ಹಾಗೂ ರಕ್ಷಣಾ ಸಚಿವರ ಸಮಯ ಕೇಳಿದ್ದು, ಅವರನ್ನು ನವದೆಹಲಿಯಲ್ಲಿ ಭೇಟಿಯಾಗಲಿದ್ದೇನೆ ಎಂದು ಹೇಳಿದರು.

- Advertisement -


ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇರುವ ತಜ್ಞರ ಸಮಿತಿ ಮುಂದುವರೆಯಲಿದೆ. ಕೇಂದ್ರ ವಿಪತ್ತು ನಿರ್ವಹಣಾ ಸಮಿತಿ ಆಕ್ಟೊಬರ್ ತಿಂಗಳಲ್ಲಿ ರಾಜ್ಯಕ್ಕೆ ಬರಬಹುದು. ಕೋವಿಡ್ ಮೂರನೇ ಅಲೆಯ ನಿಯಂತ್ರಣ ಕ್ಕೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಲು ಕೋವಿಡ್ ತಜ್ಞರ ಸಮಿತಿ ಹಾಗೂ ಸಂಬಂಧ ಪಟ್ಟ ಸಚಿವರೊಂದಿಗೆ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

- Advertisement -