Home ಟಾಪ್ ಸುದ್ದಿಗಳು ನನ್ನ ಹೇಳಿಕೆ ತಿರುಚಿದ್ದಾರೆ, ಮಾಧ್ಯಮಗಳ ಮೇಲೆ ಹಕ್ಕುಚ್ಯುತಿ ಮಂಡನೆ ಮಾಡುತ್ತೇನೆ: ಬಿಕೆ ಹರಿಪ್ರಸಾದ್

ನನ್ನ ಹೇಳಿಕೆ ತಿರುಚಿದ್ದಾರೆ, ಮಾಧ್ಯಮಗಳ ಮೇಲೆ ಹಕ್ಕುಚ್ಯುತಿ ಮಂಡನೆ ಮಾಡುತ್ತೇನೆ: ಬಿಕೆ ಹರಿಪ್ರಸಾದ್

ಬೆಂಗಳೂರು: ಪಾಕಿಸ್ತಾನ ನಮ್ಮ ಶತ್ರು ರಾಷ್ಟ್ರವಲ್ಲ, ನೆರೆಯ ರಾಷ್ಟ್ರ ಹೇಳಿಕೆಗೆ ಸಂಬಂಧಿಸಿದಂತೆ ಕೆಲವು ಮಾಧ್ಯಮಗಳು ತಿರುಚಿ ಪ್ರಸಾರ ಮಾಡುತ್ತಿವೆ. ಮಾಧ್ಯಮಗಳ ಮೇಲೆ ಹಕ್ಕುಚ್ಯುತಿ ಮಂಡನೆ ಮಾಡುತ್ತೇನೆ ಎಂದು ಎಂಎಲ್ ಸಿ ಬಿಕೆ ಹರಿಪ್ರಸಾದ್ ಹೇಳಿದ್ದಾರೆ.


ವಿಧಾನ ಪರಿಷತ್ ಮಾತನಾಡಿದ ಅವರು, ವಿಧಾನ ಪರಿಷತ್ ನಲ್ಲಿ ನಿನ್ನೆ ನಡೆದ ವಿಚಾರದಲ್ಲಿ ಕೆಲವು ಮಾಧ್ಯಮಗಳು ತಿರುಚಿ ಪ್ರಸಾರ ಮಾಡುತ್ತಿವೆ. ಇದು ಪರಿಷತ್ ಹಕ್ಕುಚ್ಯುತಿ ದಕ್ಕೆ ಆಗಲಿದೆ. ಹಾಗಾಗಿ ಸಭಾಧ್ಯಕ್ಷರಿಗೆ ಮನವಿ ಮಾಡಿದ್ದೇನೆ. ಇವತ್ತು ಕೆಲ ಮಾಧ್ಯಮಗಳ ಮೇಲೆ ಹಕ್ಕುಚ್ಯುತಿ ಮಂಡನೆ ಮಾಡುತ್ತೇನೆ. ಬಿಜೆಪಿಯವರು ತಮ್ಮ ಪ್ರಚಾರಕ್ಕೆ ಬಳಸುತ್ತಿದ್ದಾರೆ. ಬಿಜೆಪಿ ಡರ್ಟಿ ಟ್ರೀಕ್ಸ್ ಗಳಿಗೆ ಕಡಿವಾಣ ಹಾಕಬೇಕು. ನಾನು ನಿನ್ನೆ ಉತ್ತರ ನೀಡುವಾಗ ಹೇಳಿದ್ದೆ, ಪಾಕಿಸ್ತಾನ ಬಿಜೆಪಿಗೆ ಶತ್ರು ರಾಷ್ಟ್ರ ಆಗಿರಬಹುದು ಆದರೆ ನೆರೆ ರಾಷ್ಟ್ರ ಅಂತ ನಾನು ಹೇಳಿದ್ದೆ. ಅದನ್ನು ಮಾಧ್ಯಮಗಳಲ್ಲಿ ಬೇರೆ ತರಹ ಬಿಂಬಿಸಲಾಗುತ್ತಿದೆ. ಇದರ ವಿರುದ್ದ ನಾನು ಹಕ್ಕುಚ್ಯುತಿ ಮಂಡಿಸುತ್ತೇನೆ ಎಂದು ಹೇಳಿದರು.

Join Whatsapp
Exit mobile version