ಶಿಲ್ಪಾ ನಾಗ್ ರಾಜೀನಾಮೆ ಸ್ವೀಕರಿಸುವುದಿಲ್ಲ : ಸಚಿವ ಎಸ್.ಟಿ.ಸೋಮಶೇಖರ್

Prasthutha|

ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ಶ್ರೀಮತಿ ಶಿಲ್ಪ ನಾಗ್ ಅವರು ಅತ್ಯಂತ ದಕ್ಷತೆಯಿಂದ ಪ್ರಾಮಾಣಿಕತೆಯಿಂದ ಮೈಸೂರಿನಲ್ಲಿ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಅವರ ರಾಜಿನಾಮೆಯನ್ನು ಸರ್ಕಾರ ಯಾವ ಕಾರಣಕ್ಕೂ ಅಂಗೀಕಾರ ಮಾಡುವುದಿಲ್ಲ. ಈ ವಿಚಾರವಾಗಿ ಮಾನ್ಯ ಮುಖ್ಯಮಂತ್ರಿಯವರಿಗೂ ಮಾತನಾಡುತ್ತೇನೆ ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.  

- Advertisement -

ಶ್ರೀಮತಿ ಶಿಲ್ಪ ನಾಗ್ ಅವರು ಸೇವೆಯಲ್ಲಿ ಮುಂದುವರಿಯುವಂತೆ ಮನವೊಲಿಸಲಾಗುವುದು. ಅವರೊಂದಿಗೆ ದೂರವಾಣಿ ಮೂಲಕ ಮಾತನಾಡುತ್ತೇನೆ. ಶುಕ್ರವಾರ ನಾನು ಮೈಸೂರು ಪ್ರವಾಸ ಕೈಗೊಂಡಿದ್ದು, ಆ ವೇಳೆ ಖುದ್ದು ಭೇಟಿಯಾಗಿ ಮಾತನಾಡುತ್ತೇನೆ ಎಂದು ಅವರು ತಿಳಿಸಿದ್ದಾರೆ.

Join Whatsapp