ಹೈದರಾಬಾದ್: 2023ರ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ವೈಎಸ್ಆರ್ ತೆಲಂಗಾಣ ಪಕ್ಷ ಸ್ಪರ್ಧಿಸುವುದಿಲ್ಲ ಎಂದು ಪಕ್ಷದ ಅಧ್ಯಕ್ಷೆ ವೈ.ಎಸ್.ಶರ್ಮಿಳಾ ಘೋಷಿಸಿದ್ದಾರೆ.
ಹೈದರಾಬಾದ್ ನಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಭಾರತ ರಾಷ್ಟ್ರ ಸಮಿತಿ (ಬಿಆಆರ್ಎಸ್) ಅಧ್ಯಕ್ಷ ಕೆ. ಚಂದ್ರಶೇಖರ್ ರಾವ್ ಅವರ ‘ಭ್ರಷ್ಟ ಮತ್ತು ಸರ್ವಾಧಿಕಾರಿ’ ಆಡಳಿತವನ್ನು ಕೊನೆಗೊಳಿಸುವ ಅವಕಾಶ ಇರುವುದರಿಂದ ಕಾಂಗ್ರೆಸ್ ಅನ್ನು ಬೆಂಬಲಿಸಲು ಪಕ್ಷ ನಿರ್ಧರಿಸಿದೆ ಎಂದು ಹೇಳಿದರು. ಕಾಂಗ್ರೆಸ್ನ ಮತ ವಿಭಜನೆಯಾಗುವುದನ್ನು ತಾವು ಬಯಸುವುದಿಲ್ಲ ಎಂದು ಅವರು ತಿಳಿಸಿದರು.