Home ಟಾಪ್ ಸುದ್ದಿಗಳು ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಮುಫ್ತಿ

ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಮುಫ್ತಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಪೀಪಲ್ಸ್ ಡೆಮಾಕ್ರೆಟಿಕ್ ಪಕ್ಷದ(ಪಿಡಿಪಿ) ಅಧ್ಯಕ್ಷೆ ಮೆಹಬೂಬಾ ಮುಫ್ತಿ ತಿಳಿಸಿದ್ದಾರೆ.


ಮುಖ್ಯಮಂತ್ರಿಯಾದರೂ ಪಕ್ಷದ ಕಾರ್ಯಸೂಚಿಯನ್ನು ಪೂರೈಸಲು ಸಾಧ್ಯವಿಲ್ಲದಿರುವುದೇ ಸ್ಪರ್ಧೆಯಿಂದ ಹಿಂದೆ ಸರಿಯಲು ಕಾರಣ ಎಂದು ತಿಳಿಸಿದ್ದಾರೆ.


ಮುಖ್ಯಮಂತ್ರಿಯಾಗಿ ಎಫ್ ಐಆರ್ ಹಿಂತೆಗೆದುಕೊಳ್ಳಲು ಸಾಧ್ಯವಿಲ್ಲವೆಂದಾದರೆ, ಆ ಹುದ್ದೆಯಲ್ಲಿದ್ದು ಏನು ಮಾಡುತ್ತೀರಿ’ ಎಂದು ಪ್ರಶ್ನಿಸಿದ್ದಾರೆ.


ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿ ಇದೀಗ ತಮ್ಮ ನಿಲುವು ಬದಲಾಯಿಸಿದ ಒಮರ್ ಅಬ್ದುಲ್ಲ ಅವರ ಹಾಗೆ ನಿಮ್ಮ ನಿಲುವು ಬದಲಾಗುತ್ತದೆಯೇ ಎಂಬ ಪ್ರಶ್ನೆಗೆ, ‘ಒಬ್ಬ ಜವಾನನ ವರ್ಗಾವಣೆಗೂ ಗವರ್ನರ್ ಬಾಗಿಲಲ್ಲಿ ನಿಲ್ಲಬೇಕಾಗುತ್ತದೆ ಎಂದು ಒಮರ್ ಸ್ವತಃ ಹೇಳಿದ್ದಾರೆ. ಜವಾನನ ವರ್ಗಾವಣೆ ಮಾಡುವ ಬಗ್ಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ಪಕ್ಷದ ಕಾರ್ಯಸೂಚಿಯನ್ನು ಅನುಷ್ಠಾನಗೊಳಿಸಲು ಸಾಧ್ಯವೇ ಎಂಬುವುದರ ಬಗ್ಗೆ ನಾನು ಯೋಚಿಸುತ್ತೇನೆ’ ಎಂದರು.


ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ನಡುವಿನ ಮೈತ್ರಿಯ ಕುರಿತು ಮಾತನಾಡಿದ ಅವರು, ಅಧಿಕಾರದ ಆಸೆಗಾಗಿ ಎರಡು ಪಕ್ಷಗಳು ಒಟ್ಟಿಗೆ ಸೇರಿವೆ ಎಂದರು.

Join Whatsapp
Exit mobile version