Home ಟಾಪ್ ಸುದ್ದಿಗಳು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ, ಬಿಜೆಪಿಗೆ ಸೇರ್ಪಡೆಯಾಗುತ್ತೇನೆ: ಸುಮಲತಾ

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ, ಬಿಜೆಪಿಗೆ ಸೇರ್ಪಡೆಯಾಗುತ್ತೇನೆ: ಸುಮಲತಾ

ಮಂಡ್ಯ: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ನಾನು ಬಿಜೆಪಿಗೆ ಸೇರ್ಪಡೆಯಾಗುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದರು.

ಮಂಡ್ಯದಲ್ಲಿ ಕಾರ್ಯಕರ್ತರ ಸಭೆ ನಡೆಸಿ ಮಾತನಾಡಿದ ಅವರು, ನಾನು ಕಾಂಗ್ರೆಸ್ ಪಕ್ಷಕ್ಕೆ ಹೋಗುವುದಿಲ್ಲ. ನೀವು ಬೇರೆ ಯಾವುದೆ ನಿರ್ಧಾರ ತೆಗೆದುಕೊಳ್ಳಬೇಡಿ ಅಂತ ಸ್ವತಃ ಪ್ರಧಾನಿ ಮೋದಿಯವರು ನನಗೆ ಹೇಳಿದ್ದಾರೆ ಎಂದು ತಿಳಿಸಿದರು. ನಾನು ಆಕಸ್ಮಿಕವಾಗಿ ರಾಜಕೀಯ ಪ್ರವೇಶ ಮಾಡಿದೆ. ಐದು ವರ್ಷಗಳ ಹಿಂದೆ ನನಗೆ ಐತಿಹಾಸಿಕ ಗೆಲುವು ನೀಡಿದ್ರಿ. ನನಗೆ ಐತಿಹಾಸಿಕ ಗೆಲುವು ಕೊಡುಗೆಯಾಗಿ ಕೊಟ್ಟಿದ್ದೀರಿ. ಐದು ವರ್ಷಗಳಲ್ಲಿ ನನ್ನ ಜೊತೆಗಿದ್ದ ಎಲ್ಲರಿಗೂ ವಂದನೆಗಳು. ಜನಸಾಮಾನ್ಯರ ಸಮಸ್ಯೆಗಳ ಪರ ನಾನು ನಿಂತಿದ್ದೇನೆ ಎಂದರು.

Join Whatsapp
Exit mobile version