ಹಿಮಾಚಲ ಪ್ರದೇಶ | ಪಕ್ಷದ ಹಿತದೃಷ್ಟಿಯಿಂದ ಯಾವುದೇ ಕಠಿಣ ಕ್ರಮ ತೆಗೆದುಕೊಳ್ಳಲು ಹಿಂಜರಿಯುವುದಿಲ್ಲ: ಜೈರಾಮ್ ರಮೇಶ್

Prasthutha|

ನವದೆಹಲಿ: ಪಕ್ಷದ ಹಿತದೃಷ್ಟಿಯಿಂದ ಯಾವುದೇ ಕಠಿಣ ಕ್ರಮ ತೆಗೆದುಕೊಳ್ಳಲು ಹಿಂಜರಿಯುವುದಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.

- Advertisement -


ಹಿಮಾಚಲ ಪ್ರದೇಶದ ಸರ್ಕಾರದಲ್ಲಿ ಉದ್ಭವಿಸಿರುವ ರಾಜಕೀಯ ಬಿಕ್ಕಟ್ಟಿನ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ‘ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭೂಪೇಶ್ ಬಘೇಲ್, ಭೂಪಿಂದರ್ ಸಿಂಗ್ ಹಾಗೂ ಡಿ.ಕೆ ಶಿವಕುಮಾರ್ ಅವರನ್ನು ವೀಕ್ಷಕರನ್ನಾಗಿ ಕಳುಹಿಸಿದ್ದಾರೆ. ಅತೃಪ್ತರೂ ಸೇರಿ ಎಲ್ಲಾ ಶಾಸಕರೊಂದಿಗೆ ಮಾತುಕತೆ ನಡೆಸಿ ಶೀಘ್ರ ವರದಿ ನೀಡಬೇಕು ಎಂದು ರಾಜ್ಯದ ಎಐಸಿಸಿ ಉಸ್ತುವಾರಿ ರಾಜೀವ್ ಶುಕ್ಲಾ ಅವರಿಗೆ ಸೂಚಿಸಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.


ಹಿಮಾಚಲ ಪ್ರದೇಶದ ಜನಾದೇಶಕ್ಕೆ ಮೋಸ ಮಾಡಲು ಬಿಡುವುದಿಲ್ಲ. ಜನರಿಗೆ ಮಾತ್ರ ಅವರ ತೀರ್ಪನ್ನು ಹಿಂಪಡೆಯಲು ಅವಕಾಶ ಇರುವುದರಿಂದ, ಬಿಜೆಪಿ ಆಪರೇಶನ್ ಕಮಲಕ್ಕೆ ನಮ್ಮ ಜನಾದೇಶವನ್ನು ಕಳೆದುಕೊಳ್ಳಲು ಇಷ್ಟ ಪಡುವುದಿಲ್ಲ’ ಎಂದು ರಮೇಶ್ ಹೇಳಿದ್ದಾರೆ.



Join Whatsapp