ಗಾಂಧಿನಗರ: ಮೊರ್ಬಿ ಸೇತುವೆ ದುರಂತವನ್ನು ರಾಜಕೀಯಗೊಳಿಸಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ತೆಲಂಗಾಣದ ಭಾರತ್ ಜೋಡೋ ಯಾತ್ರೆಯಲ್ಲಿರುವ ರಾಹುಲ್ ಗಾಂಧಿ ಅವರು ಪ್ರತ್ರಕರ್ತರೊಬ್ಬರ ಪ್ರಶ್ನೆಗೆ ಉತ್ತರಿಸುತ್ತಾ, ನಾನು ಇದನ್ನು ರಾಜಕೀಯಗೊಳಿಸುವುದಿಲ್ಲ ಎಂದು ಹೇಳಿದ್ದಾರೆ.
ಮೊರ್ಬಿ ಸೇತುವೆ ಕುಸಿತಕ್ಕೆ ಯಾರು ಹೊಣೆ ಎಂದು ನೀವು ಭಾವಿಸುತ್ತೀರಿ? ಎಂಬ ಪ್ರಶ್ನೆಗೆ ನಾನು ಈ ಘಟನೆಯನ್ನು ರಾಜಕೀಯಗೊಳಿಸಲು ಬಯಸುವುದಿಲ್ಲ. ಜನರು ಅಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಅದನ್ನು ರಾಜಕೀಯಗೊಳಿಸುವುದು ಅಗೌರವ. ನಾನು ಅದನ್ನು ಮಾಡಲು ಹೋಗುವುದಿಲ್ಲ ಎಂದಿದ್ದಾರೆ.
ಇನ್ನು ಈ ಘಟನೆಯನ್ನು ಸಾಮಾಜಿಕ ಜಾಲತಾಣದಲ್ಲಿ, 2016ರಲ್ಲಿ ಕೋಲ್ಕತ್ತಾದಲ್ಲಿ ಫ್ಲೈಒವರ್ ಕುಸಿತಕ್ಕೆ ಹೋಲಿಸಿದ್ದು, ಪ್ರಧಾನಿ ಮೋದಿ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗಿದೆ.