‘ಅದು ಸುಳ್ಳು ಸುದ್ದಿ’; ಸಚಿವ ಸಂಪುಟಕ್ಕೆ ರಾಜೀನಾಮೆ ನೀಡುವುದಿಲ್ಲ: ಕೇಂದ್ರ ಸಚಿವ ಸುರೇಶ್ ಗೋಪಿ

Prasthutha|

ನವದೆಹಲಿ: ನಿನ್ನೆಯಷ್ಟೇ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಕೇರಳದ ಏಕೈಕ ಬಿಜೆಪಿ ಸಂಸದ ಸುರೇಶ್ ಗೋಪಿ ಅವರು ಕೇಂದ್ರ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡುವುದಿಲ್ಲ ಎಂದು ಹೇಳಿದ್ದಾರೆ.

- Advertisement -


ನಿನ್ನೆ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕೇರಳದ ಬಿಜೆಪಿ ಸಂಸದ ಸುರೇಶ್ ಗೋಪಿ ಟ್ವೀಟ್ ಮಾಡಿ, ”ನಾನು ಮೋದಿ ಸರಕಾರದ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಲಿದ್ದೇನೆ ಎಂದು ಕೆಲವು ಮಾಧ್ಯಮಗಳು ತಪ್ಪು ಸುದ್ದಿಯನ್ನು ಹರಡುತ್ತಿವೆ. ಇದು ಸಂಪೂರ್ಣ ಸುಳ್ಳು. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಾವು ಕೇರಳದ ಅಭಿವೃದ್ಧಿ ಮತ್ತು ಸಮೃದ್ಧಿಗೆ ಬದ್ಧರಾಗಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.

Join Whatsapp