‘ಮುಖ್ಯ ಕಾರ್ಯದರ್ಶಿಯನ್ನು ಹಿಂದಕ್ಕೆ ಕಳುಹಿಸುವುದಿಲ್ಲ’ : ಕೇಂದ್ರಕ್ಕೆ ಮತ್ತೊಮ್ಮೆ ಸಡ್ಡು ಹೊಡೆದ ಮಮತಾ

Prasthutha|


ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತೊಮ್ಮೆ ಕೇಂದ್ರಕ್ಕೆ ಸಡ್ಡು ಹೊಡೆದಿದ್ದು, ಮುಖ್ಯ ಕಾರ್ಯದರ್ಶಿ ಅಲಪನ್ ಬಂಡೋಪಾಧ್ಯಾಯ ಅವರನ್ನು ಸದ್ಯದ ಪರಿಸ್ಥಿತಿಯಲ್ಲಿ ಹಿಂದಕ್ಕೆ ಕಳುಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

- Advertisement -


ಸೋಮವಾರ ಪ್ರಧಾನಿ ಮೋದಿಗೆ ಪತ್ರ ಬರೆದಿರುವ ಮಮತಾ ಬ್ಯಾನರ್ಜಿ, ಮುಖ್ಯಕಾರ್ಯದರ್ಶಿಯವರನ್ನು ಹಿಂದಕ್ಕೆ ಕಳುಹಿಸಬೇಕೆಂಬ ಕೇಂದ್ರದ “ಏಕಪಕ್ಷೀಯ ಆದೇಶ” ದಿಂದಾಗಿ “ಆಘಾತ ಮತ್ತು ದಿಗ್ಭ್ರಮೆಗೊಂಡಿದ್ದೇನೆ” ಎಂದು ತಿಳಿಸಿದ್ದಾರೆ.
ಕೇಂದ್ರ ಸರ್ಕಾರವು ನಮಗೆ ಕಳುಹಿಸಿದ ಏಕಪಕ್ಷೀಯ ಆದೇಶದಿಂದ ನಾನು ಆಘಾತಕ್ಕೊಳಗಾಗಿದ್ದೇನೆ ಮತ್ತು ಬೆರಗಾಗಿದ್ದೇನೆ, ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಐಎಎಸ್ ಅಧಿಕಾರಿ ಅಲಪನ್ ಬಂಡೋಪಾಧ್ಯಾಯ ಅವರನ್ನು 2021 ರ ಮೇ 28 ರಂದು ಬಿಡುಗಡೆ ಮಾಡುವಂತೆ ಕೇಂದ್ರ ಸೂಚಿಸಿದೆ ಎಂದು ಅವರು ಹೇಳಿದ್ದಾರೆ.


ಕೇಂದ್ರ ಸರ್ಕಾರ ತನ್ನ ನಿರ್ಧಾರವನ್ನು ಮರುಪರಿಶೀಲಿಸಬೇಕು. ಸಾರ್ವಜನಿಕ ಹಿತದೃಷ್ಟಿಯಿಂದ ಇತ್ತೀಚಿನ ಆದೇಶವನ್ನು ರದ್ದುಗೊಳಿಸಲು ನಾನು ವಿನಮ್ರವಾಗಿ ವಿನಂತಿಸುತ್ತೇನೆ. ಸದ್ಯದ ಪರಿಸ್ಥಿತಿಯಲ್ಲಿ ಮುಖ್ಯ ಕಾರ್ಯದರ್ಶಿಯನ್ನು ಕರ್ತವ್ಯದಿಂದ ಬಿಡುಗಡೆ ಮಾಡಲು ಸಾಧ್ಯವಿಲ್ಲ. ಇತ್ತೀಚಿನ ಆದೇಶವು ಅನ್ವಯವಾಗುವ ಕಾನೂನುಗಳ ಉಲ್ಲಂಘನೆ ಮತ್ತು ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಮಮತಾ ಪತ್ರದಲ್ಲಿ ತಿಳಿಸಿದ್ದಾರೆ.

Join Whatsapp