ದೇಶ ವಿರೋಧಿ ಚಟುವಟಿಕೆ ನಡೆಸುವವರ ಮೇಲೆ ನಿಗಾ: ಬಸವರಾಜ ಬೊಮ್ಮಾಯಿ

Prasthutha|

ಬೆಂಗಳೂರು: ದೇಶ ವಿರೋಧಿ ಚಟುವಟಿಕೆ ನಡೆಸುವವರ ಮೇಲೆ ಪೊಲೀಸ್ ಇಲಾಖೆ ವತಿಯಿಂದ ನಿಗಾ ಇರಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

- Advertisement -


ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿಂದು ಮಾತನಾಡಿದ ಅವರು, ಉಗ್ರರ ಜೊತೆ ಕೈ ಜೋಡಿಸಿ ಕೆಲಸ ಮಾಡುವವರ ಮೇಲೆ ನಿಗಾ ವಹಿಸಲಾಗುತ್ತಿದೆ. ಈಗಾಗಲೇ ಎನ್ ಐಎ ಕೆಲವರನ್ನು ಸ್ಥಳಾಂತರಿಸಿದ್ದು, ಎನ್ ಐಎ ಜೊತೆ ಪೊಲೀಸರು ಕೂಡಿಕೊಂಡು ಕೆಲಸ ಮಾಡುತ್ತಿದ್ದಾರೆ ಎಂದರು.


ಸಾರ್ವಜನಿಕ ಗಣೇಶೋತ್ಸವಕ್ಕೆ ಅವಕಾಶ ನೀಡುವ ಬಗ್ಗೆ ಚರ್ಚೆ ನಡೆಯುತ್ತಿದೆ. ಪರಿಸ್ಥಿತಿ ನೋಡಿಕೊಂಡು ನಿರ್ಧಾರ ತೆಗೆದುಕೊಳ್ಳಲಾಗುವುದು. ಕೋವಿಡ್ ನಿಯಂತ್ರಣದಲ್ಲಿರುವ ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ ಸಡಿಲಿಕೆ ಬಗ್ಗೆ ಮುಂದಿನ ದಿನದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

Join Whatsapp