ಬಿಜೆಪಿಯಲ್ಲಿನ ಕುಟುಂಬ ರಾಜಕಾರಣ ಬಗ್ಗೆ ಮೋದಿ ಮೌನ ಮುರಿಯುತ್ತಾರಾ?: ಜೈರಾಂ ರಮೇಶ್

Prasthutha|

ನವದೆಹಲಿ: ‘ಬಿಜೆಪಿಯಲ್ಲಿರುವ ಕುಟುಂಬ ರಾಜಕಾರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮೌನ ಮುರಿಯುತ್ತಾರಾ’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಂ ರಮೇಶ್ ಪ್ರಶ್ನಿಸಿದ್ದಾರೆ.

- Advertisement -

‘ಶಿವಮೊಗ್ಗದಲ್ಲಿ ಸೋಮವಾರ ಮೋದಿ ಅವರು ಸಭೆ ನಡೆಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ರಾಘವೇಂದ್ರ ಇಲ್ಲಿನ ಸಂಸದ. ಮತ್ತೊಬ್ಬ ಮಗ ಬಿ.ವೈ. ವಿಜಯೇಂದ್ರ ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ. ಈ ಕುಟುಂಬ ರಾಜಕಾರಣದ ಬಗ್ಗೆ ಮೋದಿ ತಮ್ಮ ಮೌನ ಮುರಿದು, ಬಿಜೆಪಿಯ ನಿಲುವು ಏನು ಎಂಬುದನ್ನು ಸ್ಪಷ್ಟಪಡಿಸುತ್ತಾರಾ?’ ಎಂದಿದ್ದಾರೆ.


‘ತೀವ್ರ ಬರದಿಂದಾಗಿ ಕರ್ನಾಟಕದ ಬಹುತೇಕ ಭಾಗವು ಕುಡಿಯುವ ನೀರಿನ ಬಿಕ್ಕಟ್ಟು ಎದುರಿಸುತ್ತಿದೆ. ಆದರೆ ರಾಜ್ಯದ ಜನರಿಗೆ ನೆರವು ನೀಡುವುದನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ನಿರಾಕರಿಸಿದೆ’ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

Join Whatsapp