ಕಾವೇರಿ ನೀರು ಸಂಕಷ್ಟ ಸೂತ್ರ ರೆಡಿ ಮಾಡ್ತೇವೆ: ಡಿಕೆ ಶಿವಕುಮಾರ್

Prasthutha|

ಬೆಂಗಳೂರು: ಇಂದು ನಡೆಯುವ ಮಹತ್ವದ ಸಭೆಯಲ್ಲಿ ಸಂಕಷ್ಟ ಸೂತ್ರದ ಬಗ್ಗೆ ಚರ್ಚಿಸುತ್ತೇವೆ. ಈ ಬಂದ್ ಅವಶ್ಯಕತೆ ಇರಲಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

- Advertisement -


ನಗರದಲ್ಲಿ ಮಾತನಾಡಿದ ಅವರು, ವಿವಿಧ ಸಂಘಟನೆಗಳು ಶಾಂತಿಯುತವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ರಾಜ್ಯದ ಜನರ ರಕ್ಷಣೆಗೆ ಪೊಲೀಸ್ ಭದ್ರತೆಯನ್ನು ಹೆಚ್ಚಿಸಿದ್ದೇವೆ. ಎಂದಿನಂತೆ ಅಂಗಡಿಗಳು ಓಪನ್ ಇವೆ, ವಾಹನಗಳು ಓಡಾಡುತ್ತಿವೆ ಎಂದರು.


ಮಧ್ಯಾಹ್ನ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ದೆಹಲಿಯಲ್ಲಿ ನಡೆಯಲಿದೆ. ರಾಜ್ಯದ ಪರವಾಗಿ ಅಧಿಕಾರಿಗಳು ಭಾಗಿಯಾಗುತ್ತಾರೆ. ಬಳಿಕ ಕಾನೂನು ತಜ್ಞರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ಕರೆದಿದ್ದಾರೆ. ಕಾವೇರಿ ವಿಚಾರದಲ್ಲಿ ವಾದ ಮಂಡಿಸಿದವರೆಲ್ಲರೂ ಭಾಗಿಯಾಗುತ್ತಾರೆ ಎಂದರು.

Join Whatsapp