ಚೈತ್ರಾ ಕುಂದಾಪುರ ಅರೆಸ್ಟ್ | ದುರುದ್ದೇಶಪೂರ್ವಕವಾಗಿ ಹಿಂದೂ ಕಾರ್ಯಕರ್ತರನ್ನು ಬಂಧಿಸಿದರೆ ಪ್ರತಿಭಟನೆ: ಆರಗ ಜ್ಞಾನೇಂದ್ರ

Prasthutha|

ಶಿವಮೊಗ್ಗ: ವಂಚನೆ ಮಾಡಿದ್ದಾರೆ ಎಂದರೆ ತನಿಖೆ ಆಗಲಿ, ಆದರೆ ಅನಾವಶ್ಯಕ ಹಾಗೂ ದುರುದ್ದೇಶಪೂರ್ವಕವಾಗಿ ಹಿಂದೂ ಕಾರ್ಯಕರ್ತರನ್ನು ಬಂಧಿಸಿದರೆ ನಾವು ಪ್ರತಿಭಟನೆ ಮಾಡುತ್ತೇವೆ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

- Advertisement -


ಚೈತ್ರಾ ಕುಂದಾಪುರ ಬಂಧನದ ಬಗ್ಗೆ ಶಿವಮೊಗ್ಗದಲ್ಲಿ ಮಾತನಾಡಿದ ಅವರು, ತಪ್ಪಿದ್ದರೆ ಕ್ರಮ ಕೈಗೊಳ್ಳಲಿ. ಆದರೆ, ಅನಗತ್ಯವಾಗಿ ಹಿಂದೂ ಪರ ಕಾರ್ಯಕರ್ತರಿಗೆ ತೊಂದರೆ ಕೊಡುವುದು ಸರಿಯಲ್ಲ. ಅವರನ್ನು ಆಧಾರ ರಹಿತವಾಗಿ ಪ್ರಕರಣದಲ್ಲಿ ಸಿಲುಕಿಸಿದ್ದಾರಾ ಎಂಬುದರ ಬಗ್ಗೆ ನನಗೆ ಗೊತ್ತಿಲ್ಲ. ದುರುದ್ದೇಶಪೂರ್ವಕವಾಗಿ ಹಿಂದೂ ಕಾರ್ಯಕರ್ತರನ್ನು ಬಂಧಿಸಿದರೆ ನಾವು ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಕೆಯನ್ನು ನೀಡಿದರು.

Join Whatsapp