Home ಟಾಪ್ ಸುದ್ದಿಗಳು 15% ಕಮಿಷನ್ ಆರೋಪ ಸಾಬೀತು ಪಡಿಸಿದರೆ ರಾಜಕೀಯ ನಿವೃತ್ತಿ: ಡಿ.ಕೆ ಶಿವಕುಮಾರ್

15% ಕಮಿಷನ್ ಆರೋಪ ಸಾಬೀತು ಪಡಿಸಿದರೆ ರಾಜಕೀಯ ನಿವೃತ್ತಿ: ಡಿ.ಕೆ ಶಿವಕುಮಾರ್

ಬೆಂಗಳೂರು: ನಾನು 15% ಕಮೀಷನ್ ಕೇಳಿದ್ದೇನೆ ಅಂತ ಸಾಬೀತು ಪಡಿಸಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.


ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೊಮ್ಮಾಯಿ, ಅಶೋಕ್ ಅವರ ಅವಧಿಯಲ್ಲಿ ಯಾಕೆ ಹಣ ಬಿಡುಗಡೆ ಮಾಡಲಿಲ್ಲ ಎಂದು ಪ್ರಶ್ನಿಸಿದರು. ಕೆಂಪಣ್ಣ ಎಲ್ಲೂ ಅಧಿಕಾರಿಗಳು ಹಣ ಕೇಳಿದ್ದಾರೆ ಅಂತ ಹೇಳಿಲ್ಲ. ಹಾಗೇನಾದರು ಯಾರಾದರು ಕೇಳಿದರೆ ಆ ಅಧಿಕಾರಿ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಿ ಎಂದರು.


ನಮ್ಮ ಅಧಿಕಾರಿಗಳಿಂದ ವರದಿ ಕೇಳಿದ್ದೀನಿ, ಯಾರು ಯಾರು ಮಾತನಾಡುತ್ತಿದ್ದಾರೆ, ಯಾರು ಯಾರ ಹಿಂದಿದ್ದಾರೆ ಎಲ್ಲಾ ನನಗೆ ಗೊತ್ತು ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು.

Join Whatsapp
Exit mobile version