ನನ್ನ ಮನವಿಯನ್ನು ಸರ್ಕಾರ ಸ್ವೀಕರಿಸದಿದ್ದರೆ ಬಸ್ಸಿಗೆ ಬೆಂಕಿ ಹಾಕುತ್ತೇನೆ: ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ

Prasthutha|

ಬೆಂಗಳೂರು: ನನ್ನ ಮನವಿಯನ್ನು ಸರ್ಕಾರ ಸ್ವೀಕರಿಸದಿದ್ದರೆ ಬಸ್ಸಿಗೆ ಬೆಂಕಿ ಹಾಕುತ್ತೇನೆ ಎಂದು ಮಂಡ್ಯದ ಇದ್ರೀಶ್ ಪಾಷಾ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಗಲಭೆಗೆ ಪ್ರಚೋದನೆ ನೀಡುವ ಹೇಳಿಕೆ ನೀಡಿದ್ದಾರೆ.

- Advertisement -


ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.


ಕಳೆದ ನಾಲ್ಕು ದಿನಗಳಿಂದ ಸರಕಾರದ ವಿರುದ್ಧ ಸತ್ಯಾಗ್ರಹ ಮಾಡುತ್ತಿದ್ದ ಪುನೀತ್ ಕೆರೆಹಳ್ಳಿ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಪೊಲೀಸರು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಹಿನ್ನೆಲೆ ಪುತ್ತೂರು ಪುತ್ತಿಲ ಪರಿವಾರದ ಸ್ಥಾಪಕ ಅರುಣ್ ಕುಮಾರ್ ಪುತ್ತಿಲ ಅವರು ಅ.5ರಂದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

- Advertisement -


ಅರುಣ್ ಕುಮಾರ್ ಪುತ್ತಿಲ ಅವರ ನಿಯೋಗದೊಂದಿಗೆ ಮಾತನಾಡುತ್ತಿದ್ದ ಪುನೀತ್, ನಾನು ನಿಮಗೆ ನಿಮ್ಮ ತಮ್ಮನಾಗಿ ಬೇಕು ಅಂದ್ರೆ, ಕಾಂಗ್ರೆಸ್ ಸರಕಾರದ ಯಾವುದಾದರೂ ಪ್ರತಿನಿಧಿ ನನ್ನನ್ನು ಭೇಟಿಯಾಗಿ, ನನ್ನ ಮನವಿಯನ್ನು ಸ್ವೀಕರಿಸಬೇಕು. ಅವರು ಬರದೇ ಇದ್ದರೆ ಬಸ್ಸಿಗೆ ಬೆಂಕಿ ಹಾಕುವ… ಪೊಲೀಸರನ್ನು ಜಾಗ ಬಿಡಲಿಕ್ಕೆ ಹೇಳಿ, ನಾನು ಹೋಗ್ತೇನೆ ಎಂದು ಹೇಳಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.



Join Whatsapp