Home ಟಾಪ್ ಸುದ್ದಿಗಳು ಸಭಾಪತಿ ಅವಕಾಶ ನೀಡಿದರೆ ಸಂಸತ್ತಿನಲ್ಲಿ ಮಾತನಾಡುತ್ತೇನೆ: ರಾಹುಲ್ ಗಾಂಧಿ

ಸಭಾಪತಿ ಅವಕಾಶ ನೀಡಿದರೆ ಸಂಸತ್ತಿನಲ್ಲಿ ಮಾತನಾಡುತ್ತೇನೆ: ರಾಹುಲ್ ಗಾಂಧಿ

ನವದೆಹಲಿ: ಸಂಸತ್ತಿನಲ್ಲಿ ಸಭಾಪತಿ ಅವಕಾಶ ನೀಡಿದರೆ ಮಾತನಾಡುತ್ತೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.


ಲಂಡನ್ ನಲ್ಲಿ ತಾವು ನೀಡಿರುವ ಹೇಳಿಕೆ ವಿವಾದ ಹುಟ್ಟು ಹಾಕಿರುವ ಹಿನ್ನೆಲೆಯಲ್ಲಿ ವಿದೇಶ ಪ್ರವಾಸದಿಂದ ವಾಪಾಸ್ ಆದ ಬಳಿಕ ಸಂಸತ್ತಿಗೆ ಆಗಮಿಸಿರುವ ರಾಹುಲ್ ಗಾಂಧಿ, ಅವಕಾಶ ನೀಡಿದರೆ ಮಾತನಾಡುತ್ತೇನೆ ಎಂದು ಪ್ರತಿಕ್ರಿಯಿಸಿದ್ದಾರೆ.


ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿ ಮಾಡಿದ ಬಳಿಕ ಪ್ರತಿಕ್ರಿಯಿಸಿದ ಅವರು, ಸಂಸತ್ತಿನಲ್ಲಿ ಮಾತನಾಡಲು ಅವಕಾಶ ಕೊಟ್ಟರೆ, ನನ್ನ ಅನಿಸಿಕೆಗಳನ್ನು ಹೇಳಲಿದ್ದೇನೆ ಎಂದು ತಿಳಿಸಿದ್ದಾರೆ.
ನಾನು ಸಂಸತ್ತಿನಲ್ಲಿ ಮಾತನಾಡುವುದನ್ನು ಬಿಜೆಪಿ ಇಷ್ಟಪಡುವುದಿಲ್ಲ. ಸಂಸತ್ತಿನಲ್ಲಿ ಅವಕಾಶ ಸಿಗದಿದ್ದರೆ ಸಂಸತ್ ಹೊರಗಡೆ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.

Join Whatsapp
Exit mobile version