ಕೇಂದ್ರದ ವಿರುದ್ಧ ದೆಹಲಿಯಲ್ಲಿ ಧರಣಿ ನಡೆಸುತ್ತೇವೆ: ಸಿಎಂ ಸಿದ್ದರಾಮಯ್ಯ ಘೋಷಣೆ

Prasthutha|

ಬೆಂಗಳೂರು: ಕರ್ನಾಟಕ ರಾಜ್ಯದ ಪಾಲಿನ ಹಣವನ್ನು ಕೇಂದ್ರ ಸರ್ಕಾರ ನೀಡಬಹುದು ಎಂಬ ವಿಶ್ವಾಸವಿತ್ತು. ಆದರೆ, ಕೇಂದ್ರ ಸರ್ಕಾರವು ಅದರ ಮಾನದಂಡದಂತೆ ಕೂಡ ರಾಜ್ಯಕ್ಕೆ ಹಣ ನೀಡುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಆರೋಪಿಸಿದರು.

- Advertisement -

ಈ ಕಾರಣಕ್ಕಾಗಿ ದೆಹಲಿಯ ಜಂತರ್ ಮಂತರ್ನಲ್ಲಿ ಇಡೀ ಕರ್ನಾಟಕ ಸರ್ಕಾರ ಧರಣಿ ನಡೆಸಲಿದೆ ಎಂದು ಉಭಯ ನಾಯಕರು ತಿಳಿಸಿದರು.
ವಿಧಾನಸೌಧದಲ್ಲಿ ಸೋಮವಾರ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಸಿದ್ದರಾಮಯ್ಯ, ಕೇಂದ್ರದ ವಿರುದ್ಧ ನಾವು ಧ್ವನಿ ಎತ್ತಲೇಬೇಕಾದ ಅನಿವಾರ್ಯತೆ ಎದುರಾಗಿದೆ ಎಂದರು. ದೆಹಲಿಯಲ್ಲಿ ನಮ್ಮ ಇಡೀ ಸರ್ಕಾರ ಪ್ರತಿಭಟನೆ ಮಾಡಲಿದೆ. ಈ ಪ್ರತಿಭಟನೆಯಲ್ಲಿ ಎಲ್ಲಾ ಸಚಿವರು, ಶಾಸಕರು ಭಾಗಿಯಾಗಲಿದ್ದಾರೆ. ಪ್ರತಿಭಟನೆಯಲ್ಲಿ ಎಲ್ಲಾ ಸಂಸದರು ಕೂಡ ಭಾಗಿಯಾಗಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ಮನವಿ ಮಾಡಿದರು. ಬರಗಾಲದ ಪರಿಹಾರ ಹಣವನ್ನೂ ಕೇಂದ್ರ ಸರ್ಕಾರ ಬಿಡುಗಡೆ ಮಾಡುತ್ತಿಲ್ಲ ಎಂದು ಅವರು ಆರೋಪಿಸಿದರು.

Join Whatsapp