ರಾಜಕೀಯದಿಂದ ದೂರ ಉಳಿಯುತ್ತೇನೆ: ನಿಖಿಲ್ ಕುಮಾರಸ್ವಾಮಿ

Prasthutha|

ಬೀದರ್: ‘ರಾಜಕೀಯದಿಂದ ದೂರ ಉಳಿಯಲು ನಿರ್ಧರಿಸಿದ್ದೇನೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾರ್ಯಕರ್ತನಾಗಿ ಓಡಾಡಿ ಕೆಲಸ ಮಾಡುತ್ತೇನೆ’ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಮಗ, ನಟ ನಿಖಿಲ್ ಕುಮಾರಸ್ವಾಮಿ ಹೇಳಿದರು.

- Advertisement -


ಬೀದರ್ ನಲ್ಲಿ ಮಾತನಾಡಿರುವ ನಿಖಿಲ್, ‘ರಾಜಕೀಯದಿಂದ ದೂರುವಿರುತ್ತೇನೆ. ಆದರೆ, ಸಾಮಾನ್ಯ ಕಾರ್ಯಕರ್ತನಾಗಿ ಲೋಕಸಭೆ ಚುನಾವಣೆಯ ಪ್ರಚಾರದಲ್ಲಿ ತೊಡಗಿಕೊಳ್ಳುತ್ತೇನೆ. ಯಾವುದೇ ಕಾರಣಕ್ಕೂ ಸ್ಪರ್ಧೆ ಮಾಡಲಾರೆ’ ಎಂದಿದ್ದಾರೆ.ಈ ಹಿಂದೆ ಕುಮಾರಸ್ವಾಮಿ ಅವರು ಇದೇ ಮಾತುಗಳನ್ನು ಆಡಿದ್ದರು. ಸಿನಿಮಾದಲ್ಲಿ ಸಾಕಷ್ಟು ಅವಕಾಶಗಳು ಇರುವುದರಿಂದ ಅಲ್ಲಿಯೇ ನೆಲೆಯೂರುವಂತೆ ಹೇಳಿದ್ದೇನೆ. ರಾಜಕಾರಣಕ್ಕೆ ನಿಖಿಲ್ ಬರುವುದು ಬೇಡ ಎಂದು ಕುಮಾರಸ್ವಾಮಿಗಳು ಹೇಳಿಕೆ ನೀಡಿದ್ದರು. ತಂದೆಯ ಮಾತನ್ನು ಪುತ್ರ ನಿಖಿಲ್ ಮತ್ತೆ ನೆನಪಿಸಿದ್ದಾರೆ.