Home ಟಾಪ್ ಸುದ್ದಿಗಳು ಅಮೆರಿಕ ಅಧ್ಯಕ್ಷನಾದರೆ ರಷ್ಯಾ-ಉಕ್ರೇನ್ ಯುದ್ಧ ನಿಲ್ಲಿಸುತ್ತೇನೆ: ಝೆಲೆನ್‌ಸ್ಕಿಗೆ ಟ್ರಂಪ್ ಭರವಸೆ

ಅಮೆರಿಕ ಅಧ್ಯಕ್ಷನಾದರೆ ರಷ್ಯಾ-ಉಕ್ರೇನ್ ಯುದ್ಧ ನಿಲ್ಲಿಸುತ್ತೇನೆ: ಝೆಲೆನ್‌ಸ್ಕಿಗೆ ಟ್ರಂಪ್ ಭರವಸೆ

ವಾಷಿಂಗ್ಟನ್: ನವೆಂಬರ್‌ನಲ್ಲಿ ನಡೆಯುವ ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆದ್ದರೆ ರಷ್ಯಾ-ಉಕ್ರೇನ್ ಯುದ್ಧ ನಿಲ್ಲಿಸುತ್ತೇನೆ ಎಂದು ರಿಪಬ್ಲಿಕನ್‌ ಪಕ್ಷದ ಅಭ್ಯರ್ಥಿ, ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಉಕ್ರೇನ್‌ಗೆ ಭರವಸೆ ನೀಡಿದ್ದಾರೆ.

ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಸ್ಥಾನಕ್ಕೆ ನಾಮನಿರ್ದೇಶನಗೊಂಡಿರುವ ಡೊನಾಲ್ಡ್ ಟ್ರಂಪ್‌ಗೆ ಝೆಲೆನ್‌ಸ್ಕಿ ದೂರವಾಣಿ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದರು. ಈ ಸಂದರ್ಭ ಟ್ರಂಪ್ ಯುದ್ಧ ನಿಲ್ಲಿಸುವ ಭರವಸೆ ನೀಡಿದ್ದಾರೆ.

ನಾನು ಅಮೆರಿಕದ ಮುಂದಿನ ಅಧ್ಯಕ್ಷನಾಗಿ ಆಯ್ಕೆಯಾದಲ್ಲಿ ಜಗತ್ತಿನಲ್ಲಿ ಶಾಂತಿ ಸ್ಥಾಪಿಸುತ್ತೇನೆ. ಹಲವಾರು ಮುಗ್ದ ಜನರು ಜೀವ ಕಳೆದುಕೊಳ್ಳಲು ಕಾರಣವಾದ ಯುದ್ಧವನ್ನು ಕೊನೆಗೊಳಿಸುತ್ತೇನೆ ಎಂಬುದಾಗಿ ಝೆಲೆನ್‌ಸ್ಕಿ ಅವರಿಗೆ ವಾಗ್ದಾನ ಮಾಡಿದೆ’ ಎಂದು ಟ್ರಂಪ್ ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿದ್ದಾರೆ.

Join Whatsapp
Exit mobile version